ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 MARCH 2021
ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ನಗರ ಮತ್ತು ಸುತ್ತಮುತ್ತಲು ಐದು ಕಿ.ಮೀ ವ್ಯಾಪ್ತಿಯಲ್ಲಿ, ಮಾರ್ಚ್ 28ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 29ರ ಮಧ್ಯ ರಾತ್ರಿ 12 ಗಂಟೆವರೆಗೆ ಮಧ್ಯ ಮಾರಾಟ ನಿಷೇಧಿಸಲಾಗಿದೆ.
ಇನ್ನು, ಭದ್ರಾವತಿ ನಗರ ಮತ್ತು ಸುತ್ತಮುತ್ತಲ ಐದು ಕಿ.ಮೀ ವ್ಯಾಪ್ತಿಯಲ್ಲಿ ಮಾರ್ಚ್ 27ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 29ರ ರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟ ಮಾಡುವಂತಿಲ್ಲ.
ನಿಷೇಧಕ್ಕೆ ಕಾರಣವೇನು?
ಹೋಳಿ ಹಬ್ಬ ಮತ್ತು ಶೆಬ್ ಎ ಬರಾತ್ ಆಚರಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಶಿವಮೊಗ್ಗ ಕೋಮು ಸೂಕ್ಷ್ಮ ಸ್ಥಳವಾಗಿದೆ. ಹಾಗಾಗಿ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422