ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021
ಶಿವಮೊಗ್ಗದಲ್ಲಿ ಇವತ್ತು ಕರೋನ ಸೋಂಕಿತರ ಸಂಖ್ಯೆ ಮೂವತ್ತರ ಗಡಿ ದಾಟಿದೆ. ಕಳೆದ ಒಂದು ವಾರದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಜಿಲ್ಲೆಯಲ್ಲಿ ಇವತ್ತು 32 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 195ಕ್ಕೆ ಏರಿಕೆಯಾಗಿದೆ.
ಇವತ್ತು ಪಾಸಿಟಿವ್ ಬಂದಿರುವವರ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 14, ಭದ್ರಾವತಿಯಲ್ಲಿ 3, ಶಿಕಾರಿಪುರ 2, ತೀರ್ಥಹಳ್ಳಿ 6, ಸೊರಬ 5, ಹೊಸನಗರ 1, ಹೊರ ಜಿಲ್ಲೆಯಿಂದ ಬಂದಿರುವ ಒಬ್ಬರಲ್ಲಿ ಸೋಂಕ ಪತ್ತೆಯಾಗಿದೆ.
ಎರಡು ಸಾವಿರ ಮಂದಿಗೆ ನೆಗೆಟಿವ್
ಇವತ್ತು ಜಿಲ್ಲೆಯಲ್ಲಿ 2632 ಮಂದಿಯ ಸ್ಯಾಂಪಲ್ ಪಡೆದುಕೊಳ್ಳಲಾಗಿದೆ. ಇನ್ನು, ಪರೀಕ್ಷೆಗೆ ಒಳಪಟ್ಟ ಸ್ಯಾಂಪಲ್ಗಳ ಪೈಕಿ 2017 ಮಂದಿಯ ಸ್ಯಾಂಪಲ್ಗಳು ನೆಗೆಟಿವ್ ಬಂದಿದೆ. ಪಾಸಿಟಿವ್ ಬಂದಿರುವ 32 ಮಂದಿಯ ಪೈಕಿ ಏಳು ಮಂದಿ ಕಾಲೇಜು ವಿದ್ಯಾರ್ಥಿಗಳು ಮತ್ತು ಓರ್ವ ಸಿಬ್ಬಂದಿ ಇದ್ದಾರೆ.
ಹೋಂ ಐಸೊಲೇಷನ್ನಲ್ಲಿ ಹೆಚ್ಚು
ಸೋಂಕಿತರ ಪೈಕಿ 74 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 37 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಇನ್ನು ಅತಿ ಹೆಚ್ಚು ಅಂದರೆ, 84 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






