ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021
ಶಿವಮೊಗ್ಗ ಜಿಲ್ಲೆಯಲ್ಲೂ ಕರೋನ ಎರಡನೇ ಅಲೆ ಸ್ಪೋಟಗೊಳ್ಳುವ ಸಾದ್ಯತೆ ಇದೆ. ಮೇ ತಿಂಗಳಲ್ಲಿ ಸೋಂಕಿತರ ಸಂಖ್ಯೆ ದೊಡ್ಡ ಮಟ್ಟಿಗೆ ಏರಿಕೆಯಾಗುವ ಅಂದಾಜಿದೆ.
ಕಳೆದೊಂದು ವಾರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ತೀವ್ರ ಸ್ವರೂಪದಲ್ಲಿ ಏರಿಕೆಯಾಗುತ್ತಿದೆ. ಸೋಂಕಿತರ ಪ್ರಮಾಣ ಶೇ.1ರಷ್ಟಿದೆ ಎಂದು ಜಿಲ್ಲಾಡಳಿತ ಹೇಳುತ್ತಿದೆ. ಈ ಪ್ರಮಾಣ ಕೆಲವೇ ದಿನದಲ್ಲಿ ಮತ್ತಷ್ಟು ಹೆಚ್ಚುವ ಆತಂಕವಿದೆ.
ದಿನೇ ದಿನೇ ಹೆಚ್ಚುತ್ತಿದೆ ಸೋಂಕು
ಹತ್ತು ದಿನದಿಂದ ಸೋಂಕಿತರ ಸಂಖ್ಯೆ ಏರುಗತಿ ಕಾಣುತ್ತಿದೆ. ಮಾರ್ಚ್ 26ರಂದು 20 ಮಂದಿಗೆ ಪಾಸಿಟಿವ್ ಬಂದಿತ್ತು. ಮಾರ್ಚ್ 27ರಂದು 26 ಸೋಂಕಿತರು, ಮಾರ್ಚ್ 28ರಂದು 16 ಸೋಂಕಿತರು, ಮಾರ್ಚ್ 30ರಂದು 22 ಮಂದಿಗೆ ಸೋಂಕು, ಮಾರ್ಚ್ 31ರಂದು 32 ಸೋಂಕಿತರು, ಏಪ್ರಿಲ್ 2ರಂದು 34, ಏಪ್ರಿಲ್ 3ರಂದು 44, ಏಪ್ರಿಲ್ 4ರಂದು 21, ಏಪ್ರಿಲ್ 5ರಂದು 46 ಮಂದಿಗೆ ಸೋಂಕು ತಗುಲಿದೆ.
ಮಾರ್ಚ್ 26ರಂದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 124 ಇತ್ತು. ಮಾರ್ಚ್ 31ಕ್ಕೆ ಸೋಂಕಿತರ ಸಂಖ್ಯೆ 195ಕ್ಕೆ ಹೆಚ್ಚಳವಾಯಿತು. ಏಪ್ರಿಲ್ 2ರಂದು 239ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ ಏಪ್ರಿಲ್ 5ರ ವರದಿ ಪ್ರಕಾರ 350ಕ್ಕೆ ತಲುಪಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ಆತಂಕಕಾರಿಯಾಗಿದೆ. ಈ ನಡುವೆ ಸೋಂಕಿತರೊಬ್ಬರು ಮೃತಪಟ್ಟಿರುವುದು ಜಿಲ್ಲೆಯಲ್ಲಿ ಕರೋನ ಭೀತಿ ಮತ್ತಷ್ಟು ಹೆಚ್ಚಾಗಿದೆ.
ಸೋಂಕು ತಡೆಗೆ ಕ್ರಮ
ಇತ್ತ ಜಿಲ್ಲಾಡಳಿತ ಸೋಂಕು ಹರಡದಂತೆ ತಡೆಯಲು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸಾಲು ಸಾಲು ಸಭೆಗಳನ್ನು ನಡೆಸುತ್ತಿದ್ದಾರೆ.
‘ಸಾಮಾಜಿಕ ಅಂತರ, ಕಡ್ಡಾಯ ಮಾಸ್ಕ್ ಧರಿಸುವುದು ಸೇರಿದಂತೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಇದರ ಜೊತೆಗೆ ಲಸಿಕೆ ಹಾಕಿಸಿಕೊಳ್ಳುವಂತೆ ಜನರನ್ನು ಪ್ರೇರೇಪಿಸಲಾಗುತ್ತಿದೆ. ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ನೋಡಿಕೊಳ್ಳಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಸೋಂಕು ತಡೆಗೆ ಇರೊದೊಂದೇ ಮಾರ್ಗ
ಮೇ ತಿಂಗಳ ವೇಳೆಗೆ ರಾಜ್ಯದಲ್ಲಿ ಕರೋನ ಸ್ಪೋಟಗೊಳ್ಳಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ನಡುವೆ ಜಿಲ್ಲೆಯಲ್ಲೂ ಇದೆ ಅತಂಕ ಹೆಚ್ಚಾಗಿದ್ದು, ಸೋಂಕಿತರ ಚಿಕಿತ್ಸೆಗೆ ಸಮರೋಪಾದಿಯಲ್ಲಿ ಸಿದ್ದತೆ ಮಾಡಕೊಳ್ಳಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ, ಬೆಡ್‍ಗಳನ್ನು ಸಜ್ಜುಗೊಳಿಸಲಾಗುತ್ತಿದೆ.
ಜನರು ಸ್ವಯಂಪ್ರೇರಿತವಾಗಿ ಸಾಮಾಜಿಕ ಅಂತರ, ಕಡ್ಡಾಯವಾಗಿ ಮಾಸ್ಕ್ ಧರಿಸುವುದನ್ನು ಪುನಾರಂಭಿಸಬೇಕಿದೆ. ಇಲ್ಲವಾದಲ್ಲಿ ಸೋಂಕಿಗೆ ತುತ್ತಾಗುವ ಆತಂಕವಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200