ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 APRIL 2021
ಜೆಡಿಎಸ್ ಪಕ್ಷದ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಇವತ್ತು ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದರು. ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸುಂದರೇಶ್ ಅವರಿಂದ ಮಂಜುನಾಥಗೌಡ ಮತ್ತು ಬೆಂಬಲಿಗರು ಸದಸ್ಯತ್ವ ಪಡೆದು, ಪಕ್ಷಕ್ಕೆ ಸೇರ್ಪಡೆಯಾದರು.
ಯಾರೆಲ್ಲ ಕಾಂಗ್ರೆಸ್ ಸೇರಿದರು?
ಆರ್.ಎಂ.ಮಂಜುನಾಥಗೌಡ ಅವರೊಂದಿಗೆ ಶಿವಮೊಗ್ಗ ಎಪಿಎಂಸಿ ಅಧ್ಯಕ್ಷ ದುಗ್ಗಪ್ಪಗೌಡ, ಟಿ.ಎಲ್.ಸುಂದರೇಶ್, ಪಿ.ಕರಿಯಪ್ಪ, ಬಿ.ಆರ್.ರಾಘವೇಂದ್ರ ಶೆಟ್ಟಿ, ಸೈಯದ್ ಯಾಸೀನ್, ಕೆ.ಎಲ್.ಜಗದೀಶ್ವರ್, ರತ್ನಾಕರ ಶೆಟ್ಟಿ, ಟಿ.ಎನ್.ಹರೀಶ್, ಎಂ.ರಮೇಶ್ ಶಂಕರಘಟ್ಟ, ರಾಘವೇಂದ್ರ ವಿ.ಶೆಟ್ಟಿ, ಹೆಚ್.ಆರ್.ಅಶ್ವಥ ಗೌಡ, ಕೆ.ಆರ್.ನಾಗರಾಜ, ರಾಮ ಸೇರಿದಂತೆ ಹಲವರು ಪಕ್ಷ ಸೇರ್ಪಡೆಯಾದರು.
ಸದಸ್ಯತ್ವ ಚೀಟಿ, ಶಾಲು, ಸಿಹಿ
ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಮಂಜುನಾಥಗೌಡ ಮತ್ತು ಬೆಂಬಲಿಗರಿಗೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು, ಸದಸ್ಯತ್ವ ಚೀಟಿ ನೀಡಿದರು. ಎಲ್ಲರಿಗೂ ಕಾಂಗ್ರೆಸ್ ಶಾಲು ಹೊದಿಸಿ, ಸಿಹಿ ತಿನ್ನಿಸಿ ಪಕ್ಷಕ್ಕೆ ಸ್ವಾಗತಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

About The Editor
ನಿತಿನ್ ಆರ್.ಕೈದೊಟ್ಲು






