ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | NEWS | 30 APRIL 2021
ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಕರೋನ ಸೋಂಕಿತರ ಸಂಖ್ಯೆ ದುಪ್ಪಟ್ಟಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 846 ಮಂದಿಗೆ ಸೋಂಕು ತಗುಲಿದೆ.
ಶಿವಮೊಗ್ಗ ತಾಲೂಕಿನಲ್ಲಿ 252, ಭದ್ರಾವತಿಯಲ್ಲಿ 130, ಶಿಕಾರಿಪುರ 99, ತೀರ್ಥಹಳ್ಳಿ 55, ಸೊರಬ 79, ಹೊಸನಗರ 18, ಸಾಗರ 183, ಇತರೆ ಜಿಲ್ಲೆಯಿಂದ ಬಂದವರು 30 ಮಂದಿಗೆ ಸೋಂಕು ತಗುಲಿದೆ.
ಐನೂರು ಮಂದಿ ಗುಣಮುಖ
ಶಿವಮೊಗ್ಗ ಜಿಲ್ಲೆಯಾದ್ಯಂತ ಸದ್ಯ 2780 ಮಂದಿ ಕರೋನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. 1798 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. 459 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 17 ಮಂದಿ ಕೋವಿಡ್ ಕೇರ್ ಸೆಂಟರ್ನಲ್ಲಿ, 333 ಮಂದಿ ಖಾಸಗಿ ಆಸ್ಪತ್ರೆಯಲ್ಲಿ, 173 ಮಂದಿ ಟ್ರಯೇಜ್ನಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಇನ್ನೊಂದೆಡೆ ಶಿವಮೊಗ್ಗದಲ್ಲಿ ಇವತ್ತು 505 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಆರು ಮಂದಿ ಕರೋನದಿಂದ ಮೃತರಾಗಿದ್ದಾರೆ ಎಂದು ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ. ಇದರಿಂದ ಕೋವಿಡ್ ಕಾರಣಕ್ಕೆ ಈವರೆಗೂ ಮೃತರಾದವರ ಸಂಖ್ಯೆ 380ಕ್ಕೆ ಏರಿಕೆಯಾಗಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು
















