ಶಿವಮೊಗ್ಗ ಲೈವ್.ಕಾಂ | SHIMOGA NEWS | 10 MAY 2021
ಶಿವಮೊಗ್ಗದಲ್ಲಿ ಮೊದಲ ದಿನದ ಲಾಕ್ ಡೌನ್ ಬಹುತೇಕ ಯಶಸ್ವಿಯಾಗಿದೆ. ನಗರದಾದ್ಯಂತ ಜನ ಸಂಚಾರ ಸಂಪೂರ್ಣ ತಗ್ಗಿದೆ. ಅಂಗಡಿಗಳು ಬಂದ್ ಆಗಿವೆ. ವಾಹನಗಳ ಸಂಖ್ಯೆಯು ಕುಸಿತವಾಗಿದೆ.
ಸಿಟಿಯಲ್ಲಿ ಹೇಗಿದೆ ಪರಿಸ್ಥಿತಿ?
ಶಿವಮೊಗ್ಗ ನಗರದಾದ್ಯಂತ ಪೊಲೀಸರು ಚೆಕ್ ಪೋಸ್ಟ್‍ಗಳನ್ನು ಹಾಕಿದ್ದಾರೆ. ಪ್ರತಿ ವಾಹನದ ತಪಾಸಣೆ ನಡೆಸಾಗುತ್ತಿದೆ. ಕಾರಣವಿಲ್ಲದೆ ಓಡಾಡುತ್ತಿರುವವರ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ.
ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿತ್ತು. ಆದರೆ ಆಯಾ ವಾರ್ಡ್ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ ಹಾಕಿದ್ದರಿಂದ ಜನರು ತಮ್ಮ ಮನೆ ಸಮೀಪದಲ್ಲೆ ಅಗತ್ಯ ವಸ್ತುಗಳ ಖರೀದಿಸಿದರು.
ತಳ್ಳುಗಾಡಿಯಲ್ಲಿ ತರಕಾರಿ ಮತ್ತು ಹಣ್ಣು ವ್ಯಾಪಾರಕ್ಕೆ ಅವಕಾಶವಿತ್ತು. ರಸ್ತೆ ಬದಿಯಲ್ಲಿ ನಿಲ್ಲಿಸಿಕೊಂಡು ವ್ಯಾಪಾರಕ್ಕೆ ಅವಕಾಶ ಇರಲಿಲ್ಲ.
ಆಸ್ಪತ್ರೆಗೆ ಹೋಗುವವರು ಮತ್ತು ಅಗತ್ಯ ಸೇವೆಯಲ್ಲಿ ತೊಡಗಿರುವವರ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿತ್ತು. ಆದರೆ ಐಡಿ ಕಾರ್ಡ್ ಮತ್ತು ದಾಖಲೆಗಳು ಸಮರ್ಪಕವಾಗಿದ್ದರೆ ಮಾತ್ರ ವಾಹನಗಳನ್ನು ಬಿಡಲಾಗುತ್ತಿತ್ತು.
ವಾಹನ ಸಂಚಾರಕ್ಕೆ ನಿರ್ಬಂಧವಿದ್ದರಿಂದ ಅಗತ್ಯ ಕೆಲಸಗಳಿಗೆ ಜನರು ಕಾಲ್ನಡಿಗೆಯನ್ನೇ ಆಶ್ರಯಿಸಬೇಕಾಯಿತು. ಹಲವು ಕಡೆ ನಡೆದು ಓಡಾಡುವವರನ್ನು ತಡೆದು ಪೊಲೀಸರು ಪ್ರಶ್ನೆ ಮಾಡಿದರು. ಈ ವೇಳೆ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಖಡಕ್ ವಾರ್ನಿಂಗ್ ನೀಡಿದರು.
ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದ 300ಕ್ಕೂ ಹೆಚ್ಚು ವಾಹನಗಳನ್ನು ಮಧ್ಯಾಹ್ನದ ವೇಳೆ ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್ ಮಾಹಿತಿ ನೀಡಿದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು