ಶಿವಮೊಗ್ಗ ಸಿಟಿ ಲಾಕ್ ಡೌನ್, ಜಿಲ್ಲಾಧಿಕಾರಿಯಿಂದ ಹೇಳಿಕೆ ಬಿಡುಗಡೆ, ಏನಿರುತ್ತೆ? ಏನಿರಲ್ಲ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MAY 2021

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ ಈಗ ಜಾರಿಯಲ್ಲಿರುವ ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ಏನಿರುತ್ತೆ? ಏನಿರಲ್ಲ?

ಸರ್ಕಾರದ ಮಾರ್ಗಸೂಚಿ ಪ್ರಕಾರ ದಿನಸಿ, ತರಕಾರಿ ಇತ್ಯಾದಿ ಅಗತ್ಯ ವಸ್ತುಗಳ ಮಾರಾಟಕ್ಕೆ ನಿರ್ಬಂಧವಿರುವುದಿಲ್ಲ.

ಸಾರ್ವಜನಿಕರು ತಮ್ಮ ಮನೆಯ ಹತ್ತಿರವಿರುವ ಅಗತ್ಯ ವಸ್ತುಗಳ ಅಂಗಡಿಗಳಿಂದ ಈ ವಸ್ತುಗಳನ್ನು ನಿಗದಿಪಡಿಸಲಾಗಿರುವ  ಅವಧಿಯಲ್ಲಿ ಖರೀದಿ ನಡೆಸಬಹುದಾಗಿದೆ.

ಈ ಅವಧಿಯಲ್ಲಿ ಕೈಗಾರಿಕಾ ಚಟುವಟಿಕೆಗಳು, ಗಾಂಧಿ ಬಜಾರ್, ಎಪಿಎಂಸಿ ಮತ್ತು ಸಗಟು ದಿನಸಿ ವ್ಯಾಪಾರವನ್ನು  ಸ್ಥಗಿತಗೊಳಿಸಲು ಸಂಬಂಧಪಟ್ಟ ಸಂಘಗಳು ಮುಂದೆ ಬಂದಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿಯಾಗಿ ಜಾರಿಗೊಳಿಸಲು ಸಾಧ್ಯವಾಗಲಿದೆ.

ಇದನ್ನೂ ಓದಿ  | ಶಿವಮೊಗ್ಗ ನಗರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್, ಮನೆಯಿಂದ ಹೊರಗೆ ಬರುವಂತೆಯೇ ಇಲ್ಲ

ಲಾಕ್ ಡೌನ್ ಬಿಗಿಯಾಗಿ ಜಾರಿಗೊಳಿಸುವ ನಿರ್ಧಾರದ ಬಗ್ಗೆ ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 12, 2021 at 8:18 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 12, 2021

Leave a Comment