ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | AYANUR NEWS | 15 MAY 2021
ಹಳ್ಳಿ ಹಳ್ಳಿಯಲ್ಲೂ ಕರೋನ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ಸೋಂಕು ಹರಡುವುದನ್ನು ತಡೆಯಲು ಗ್ರಾಮೀಣ ಭಾಗದಲ್ಲೇ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಂತೆ ಆಯನೂರಿನಲ್ಲಿ ಒಂದು ದಿನ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯ ಹಳ್ಳಿಗಳೇ ಎರಡನೇ ಅಲೆ ಕರೋನಾದ ಟಾರ್ಗೆಟ್, ಜಾಗೃತರಾಗದಿದ್ದರೆ ಇನ್ನಷ್ಟು ಅಪಾಯ ಫಿಕ್ಸ್
ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಆಯನೂರು ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲು ಟಾಸ್ಕ್ ಫೋರ್ಸ್ ಸಭೆಯಲ್ಲಿ ನಿರ್ಧರಿಸಲಾಗಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಂದ್ರ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಆಯನೂರಿನಲ್ಲಿ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಿಸಲು ತೀರ್ಮಾನಿಸಲಾಗಿದೆ. ಮೆಡಿಕಲ್ ಶಾಪ್, ಆಸ್ಪತ್ರೆ, ಹಾಲು ಮಾರಾಟಕ್ಕೆ ಮಾತ್ರ ಅವಕಾಶವಿದೆ.

ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರೋನ ಪ್ರಕರಣಗಳು ಹೆಚ್ಚುತ್ತಿವೆ. ಸದ್ಯ 36 ಸೋಂಕಿತರು ಈ ಭಾಗದಲ್ಲಿದ್ದಾರೆ. ಸೋಂಕು ಮತ್ತಷ್ಟು ವ್ಯಾಪಕವಾಗಿ ಹರಡುವ ಭೀತಿಯ ಹಿನ್ನೆಲೆ ಭಾನುವಾರ ಬಂದ್ ಮಾಡುವಂತೆ ಸೂಚಿಸಲಾಗಿದೆ. ಇಲ್ಲಿ ಪ್ರತಿ ಭಾನುವಾರ ಸಂತೆ ನಡೆಯುತ್ತಿತ್ತು.
ಕೋಹಳ್ಳಿ ಪಿಡಿಒ ಶಶಿಕಲಾ, ಗ್ರಾಮ ಪಂಚಾಯಿತಿ ಸದಸ್ಯರು ಟಾಸ್ಕ್ ಫೋರ್ಸ್ ಸಭೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






