ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸಾವಿನ ವಿಚಾರದಲ್ಲಿ ಸುಳ್ಳು ಲೆಕ್ಕ, ಶಾಸಕರಿಂದಲೇ ಗಂಭೀರ ಆರೋಪ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್‌.ಕಾಂ | SHIMOGA NEWS | 17 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆಯನ್ನು ತಪ್ಪಾಗಿ ತೋರಿಸಲಾಗುತ್ತೆ ಅಂತಾ ಜನರು ಶಂಕೆ ವ್ಯಕ್ತಪಡಿಸಿದ್ದರು. ಈಗ ಆಡಳಿತ ಪಕ್ಷದ ಶಾಸಕರೊಬ್ಬರು ಈ ಕುರಿತು ಪ್ರಶ್ನೆ ಎತ್ತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಈ ಕುರಿತು ಪ್ರಶ್ನಿಸಿದ್ದಾರೆ. ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಅವರ ಕಣ್ಣೊರೆಸಲು ಹೀಗೆ ಮಾಡ್ತಿದ್ದೀರಾ ಅಧಿಕಾರಿಗಳನ್ನು ಪ್ರಶ್ನಿಸಿದರು.

ಶಾಸಕರು ಪ್ರಸ್ತಾಪಿಸಿದ್ದೇನು?

ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಗಾದವರನ್ನು ಮಾತ್ರ ಸೋಂಕಿತರು ಎಂದು ಪರಿಗಣಿಸಲಾಗುತ್ತದೆ. ಆದರೆ ಸಿಟಿ ಸ್ಕ್ಯಾನ್ ಮಾಡಿಸಿಕೊಂಡು ಬಂದು ಚಿಕಿತ್ಸೆಗೆ ದಾಖಲಾದವರನ್ನು ಈ ಪಟ್ಟಿಗೆ ಸೇರಿಸುತ್ತಿಲ್ಲ.

ಇದೆ ರೀತಿ ಸಾವಿನ ವಿಚಾರದಲ್ಲೂ ಸಮಸ್ಯೆ ಆಗುತ್ತಿದೆ. ಸಿಟಿ ಸ್ಕ್ಯಾನ್‌‌ ಪಟ್ಟಿಯಲ್ಲಿರುವವರು ಮೃತರಾದರೆ ಅದನ್ನು ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಗೆ ಸೇರಿಸುತ್ತಿಲ್ಲ.

130420 Ayanur Manjunath Visit Corona Ward 1 1
File Photo

ಸೋಂಕಿತರು ಚಿಕಿತ್ಸೆಗೆ ಬಂದಾಗ ಅವರಿಗೆ ಏನೇನು ಕಾಯಿಲೆ ಇದೆ ಎಂಬುದನ್ನು ಬರೆಸಿಕೊಳ್ಳುತ್ತಿದ್ದಾರೆ. ಒಂದು ವೇಳೆ ಅವರು ಮೃತರಾದರೆ ಆ ಹೃದಯ ಸಂಬಂಧಿ ಕಾಯಿಲೆ, ಕಿಡ್ನಿ ಸಮಸ್ಯೆ ಎಂದು ನೆಪ ಹೇಳಲಾಗುತ್ತಿದೆ.

ಅಧಿಕಾರಿಗಳು ಹೇಳಿದ್ದೇನು?

ಎಲ್ಲಾ ಬಗೆಯ ಸಾವನ್ನು ಆಡಿಟ್ ಮಾಡುತ್ತೇವೆ. ಸಿಟಿ ಸ್ಕ್ಯಾನ್ ವಿಚಾರವನ್ನೂ ಆಡಿಟ್ ಮಾಡಲಿದ್ದೇವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಭೆಗೆ ತಿಳಿಸಿದರು.

ಇನ್ನು ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ ಮಾತನಾಡಿ, ಶಾಸಕರು ಹೇಳಿರುವುದನ್ನು ಪರಿಶೀಲನೆ ನಡೆಸುತ್ತೇವೆ ಎಂದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment