ಮುಗೀತು ನಾಲ್ಕು ದಿನದ ‘ಕಠಿಣ ಲಾಕ್ ಡೌನ್’, ಇವತ್ತು ಶಿವಮೊಗ್ಗ ನಗರದ ವಾತಾವರಣ ಚೇಂಜ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MAY 2021

ನಾಲ್ಕು ದಿನದ ಕಠಿಣ ಲಾಕ್‍ ಡೌನ್ ಮುಗಿಯುತ್ತಿದ್ದಂತೆ ಶಿವಮೊಗ್ಗ ನಗರದಲ್ಲಿ ಜನ ಮತ್ತು ವಾಹನ ಸಂಚಾರ ಹೆಚ್ಚಳವಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಜನ ದೊಡ್ಡ ಸಂಖ್ಯೆಯಲ್ಲಿ ಮನೆಯಿಂದ ಹೊರ ಬಂದಿದ್ದಾರೆ.

ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿತ್ತು. ಹಾಗಾಗಿ ಜನ ಸಂಚಾರ ಹೆಚ್ಚಳವಾಗಿದೆ.

ಶಿವಮೊಗ್ಗದ ಜೈಲ್ ರಸ್ತೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನ ಸಂಚಾರವಿದೆ. ಅಗತ್ಯ ವಸ್ತುಗಳ ಅಂಗಡಿಗಳಲ್ಲಿ ವ್ಯಾಪಾರ ಬಿರುಸಾಗಿದೆ. ಜೈಲ್ ಸರ್ಕಲ್‍ನಿಂದ ನೆಹರೂ ರಸ್ತೆಗೆ ಸಂಪರ್ಕ ಕಲ್ಪಿಸುವ ಕುವೆಂಪು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ನೆಹರೂ ರೋಡ್‍ನಲ್ಲಿ ಅಂಗಡಿಗಳು ಬಂದ್ ಆಗಿವೆ. ಗಾಂಧಿ ಬಜಾರ್‍ನಲ್ಲೂ ಅಗತ್ಯ ವಸ್ತುಗಳ ಖರೀದಿಗೆ ಜನರು ಆಗಮಿಸಿದ್ದರು. ವಿನೋಬನಗರ, ಪೊಲೀಸ್ ಚೌಕಿಯಲ್ಲೂ ಜನ ದಟ್ಟಣೆ ಹೆಚ್ಚಿತ್ತು. ಗೋಪಾಳ ಬಡಾವಣೆಯಲ್ಲಿ ಸಾಮಾನ್ಯ ದಿನದ ಹಾಗೆ ಜನ ಸಂಚಾರವಿತ್ತು. ಮುಖ್ಯ ರಸ್ತೆಯ ಶಾಪಿಂಗ್ ಮಾಲ್‍ನಲ್ಲಿ ಖರೀದಿಗೆ ಜನ ಸೇರಿದ್ದರು.

ಇತ್ತ ವಿದ್ಯಾನಗರ, ಹೊಳೆ ಬಸ್‍ ಸ್ಟಾಪ್‍ನಲ್ಲೂ ವಾಹನ ಮತ್ತು ಜನ ದಟ್ಟಣೆ ಇತ್ತು. ಅಗತ್ಯ ವಸ್ತುಗಳ ಖರೀದಿ, ತುರ್ತು ಸೇವೆಗಳಿಗೆ ತೆರಳುವವರು ಮತ್ತು ಸರ್ಕಾರ ನಿರ್ಬಂಧದಿಂದ ವಿನಾಯಿತಿ ಪಡೆದಿರುವ ಸೇವೆ ಮತ್ತು ಕಚೇರಿಗಳಿಗೆ ತೆರಳುವವರು ರಸ್ತೆಗಿಳಿದಿದ್ದರು.

ನಾಲ್ಕು ದಿನದ ಬಳಿಕ ಶಿವಮೊಗ್ಗ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ವಹಿವಾಟು ನಡೆಸಲಾಯಿತು. ಆದರೆ ಹೋಲ್‍ ಸೇಲ್‍ಗೆ ಮಾತ್ರ ಅವಕಾಶ ನೀಡಲಾಗಿದೆ.

ಇನ್ನು, ಲಾಕ್ ಡೌನ್ ವಿನಾಯಿತಿ ಅವಧಿ ಮುಗಿಯುತ್ತಿದ್ದಂತೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಮುಖ ರಸ್ತೆ, ಸರ್ಕಲ್‍ಗಳಲ್ಲಿ ತಪಾಸಣೆ ಶುರು ಮಾಡಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 17, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment