ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MAY 2021
ಲಾಕ್ ಡೌನ್ ಸಂದರ್ಭದಲ್ಲೂ ಕಿಡಿಗೇಡಿಗಳು ಅಟ್ಟಹಾಸ ಮುಂದುವರೆಸಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗ್ಲಾಸ್ ಒಡೆದು ಕುಕೃತ್ಯ ಎಸಗಿದ್ದಾರೆ.
ಶಿವಮೊಗ್ಗದ ಎಂಕೆಕೆ ರಸ್ತೆ, ಸಿದ್ದಯ್ಯ ರಸ್ತೆ, ಮಂಜುನಾಥ ಟಾಕೀಸ್ ರಸ್ತೆ, ಗಾಂಧಿ ಬಜಾರ್ ಸುತ್ತಮುತ್ತ ಕಾರುಗಳ ಗ್ಲಾಸ್ ಒಡೆಯಲಾಗಿದೆ. ಮನೆಗಳ ಮುಂದೆ ನಿಲ್ಲಿಸಿದ್ದ ಕಾರುಗಳ ಗ್ಲಾಸ್‍ಗಳನ್ನು ಒಡೆದು ಹಾಕಲಾಗಿದೆ. ಬೈಕುಗಳಿಗೂ ಹಾನಿ ಉಂಟು ಮಾಡಲಾಗಿದೆ.
ಸುಮಾರು ಹನ್ನೊಂದು ಕಾರುಗಳ ಗಾಜು ಪುಡಿಪುಡಿಯಾಗಿದೆ. ತಡರಾತ್ರಿ ಅಥವಾ ಬೆಳಗಿನ ಜಾವ ಕೃತ್ಯ ನಡೆದಿರುವ ಶಂಕೆ ಇದೆ.
ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ದೊಡ್ಡಪೇಟೆ ಠಾಣೆ ಇನ್ಸ್‍ಪೆಕ್ಟರ್ ಹರೀಶ್ ಪಟೇಲ್, ಕೋಟೆ ಠಾಣೆ ಇನ್ಸ್‍ಪೆಕ್ಟರ್ ಚಂದ್ರಶೇಖರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





