ಶಿವಮೊಗ್ಗ ಗಾಂಧಿ ಬಜಾರ್ ಸುತ್ತಮುತ್ತ ಮನೆ ಮುಂದೆ ನಿಲ್ಲಿಸಿದ್ದ ಸಾಲು ಸಾಲು ಕಾರುಗಳ ಗ್ಲಾಸ್ ಪೀಸ್ ಪೀಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MAY 2021

ಲಾಕ್ ಡೌನ್ ಸಂದರ್ಭದಲ್ಲೂ ಕಿಡಿಗೇಡಿಗಳು ಅಟ್ಟಹಾಸ ಮುಂದುವರೆಸಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗ್ಲಾಸ್ ಒಡೆದು ಕುಕೃತ್ಯ ಎಸಗಿದ್ದಾರೆ.

ಶಿವಮೊಗ್ಗದ ಎಂಕೆಕೆ ರಸ್ತೆ, ಸಿದ್ದಯ್ಯ ರಸ್ತೆ, ಮಂಜುನಾಥ ಟಾಕೀಸ್ ರಸ್ತೆ, ಗಾಂಧಿ ಬಜಾರ್ ಸುತ್ತಮುತ್ತ ಕಾರುಗಳ ಗ್ಲಾಸ್‍ ಒಡೆಯಲಾಗಿದೆ. ಮನೆಗಳ ಮುಂದೆ ನಿಲ್ಲಿಸಿದ್ದ ಕಾರುಗಳ ಗ್ಲಾಸ್‍ಗಳನ್ನು ಒಡೆದು ಹಾಕಲಾಗಿದೆ. ಬೈಕುಗಳಿಗೂ ಹಾನಿ ಉಂಟು ಮಾಡಲಾಗಿದೆ.

ಸುಮಾರು ಹನ್ನೊಂದು ಕಾರುಗಳ ಗಾಜು ಪುಡಿಪುಡಿಯಾಗಿದೆ. ತಡರಾತ್ರಿ ಅಥವಾ ಬೆಳಗಿನ ಜಾವ ಕೃತ್ಯ ನಡೆದಿರುವ ಶಂಕೆ ಇದೆ.

ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್‍.ಟಿ.ಶೇಖರ್, ದೊಡ್ಡಪೇಟೆ ಠಾಣೆ ಇನ್ಸ್‍ಪೆಕ್ಟರ್‍ ಹರೀಶ್ ಪಟೇಲ್, ಕೋಟೆ ಠಾಣೆ ಇನ್ಸ್‍ಪೆಕ್ಟರ್ ಚಂದ್ರಶೇಖರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 20, 2021 at 9:26 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 20, 2021

Leave a Comment