ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 MAY 2021
ಕರೋನ ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಭದ್ರಾವತಿ ತಾಲೂಕನ್ನು ಎರಡು ದಿನ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಮೇ 22 ಮತ್ತು 23ರಂದು ಬಂದ್ ಮಾಡಲಾಗುತ್ತದೆ.
ಈ ಕುರಿತು ತಹಶೀಲ್ದರ್ ಜಿ.ಸಂತೋಷ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಹಾಲು ಮತ್ತು ಮೆಡಿಕಲ್ ಶಾಪ್ ಹೊರತುಪಡಿಸಿ ಬೇರಾವುದೆ ಅಂಗಡಿಗಳನ್ನು ತೆಗೆಯುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಜನರು ಅನಗತ್ಯವಾಗಿ ಸಂಚರಿಸುವುದನ್ನು ಈ ಸಂದರ್ಭ ನಿಷೇಧಿಸಲಾಗಿದೆ. ಸಾರ್ವಜನಿಕರು ಮನೆಯಲ್ಲಿ ಇದ್ದು ಲಾಕ್ ಡೌನ್‍ಗೆ ಸಹಕಾರ ನೀಡಬೇಕು ಎಂದು ತಹಶೀಲ್ದಾರ್ ಮನವಿಯಲ್ಲಿ ತಿಳಿಸಿದ್ದಾರೆ.
ಸಚಿವ ಸಭೆ ಬಳಿಕ ನಿರ್ಧಾರ
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಸಂಗಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಪೂರ್ಣ ಲಾಕ್ ಡೌನ್ ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ತಾಲೂಕು ದಂಡಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.
ಸೋಂಕಿತರ ಸಂಖ್ಯೆಯಲ್ಲಿ ಏರಿಕೆ
ಭದ್ರಾವತಿ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಮೇ 20ರಂದು 207 ಮಂದಿಗೆ ಪಾಸಿಟಿವ್ ಬಂದಿದೆ. ಮೇ 19ರಂದು 133, ಮೇ 18ರಂದು 164, ಮೇ 17ರಂದು 58 ಮಂದಿಗೆ ಸೋಂಕು ತಗುಲಿದೆ. ಹೀಗೆ ಪ್ರತಿದಿನ ದೊಡ್ಡ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗುತ್ತಿರುವುದರಿಂದ ಲಾಕ್ ಡೌನ್ ಮಾಡಲಾಗುತ್ತಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















