ಶಿವಮೊಗ್ಗ ಲೈವ್.ಕಾಂ | TALAGUPPA NEWS | 28 JUNE 2021
ಚಲಿಸುತ್ತಿದ್ದ ರೈಲಿಗೆ ಸಿಲುಕಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ತಳಗುಪ್ಪ – ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಯುವಕ ಸಿಲುಕಿದ್ದಾನೆ.
ಹೇಗಾಯ್ತು ಘಟನೆ?
ಸಿದ್ದಾಪುರ ತಾಲೂಕಿನ ನವೀನ್ (18) ರೈಲಿಗೆ ಸಿಲುಕಿದ ಯುವಕ.
ಪ್ಲಾಟ್ಫಾರಂ ಜಾರುತ್ತಿದ್ದರಿಂದ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಪ್ಲಾಟ್ಫಾರಂನಿಂದ ಜಾರಿದ ನವೀನ್ ರೈಲಿನ ಕೆಳಗೆ ಬಿದ್ದಿದ್ದಾನೆ. ಈ ವೇಳೆ ರೈಲು ಚಲಿಸಿದ್ದರಿಂದ ನವೀನ್ ಕಾಲು ಮತ್ತು ಕೈಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.