BREAKING NEWS | ತಾಳಗುಪ್ಪ – ಬೆಂಗಳೂರು ರೈಲಿನಡಿ ಸಿಲುಕಿ ಯುವಕನ ಕಾಲು ಕಟ್

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | TALAGUPPA NEWS | 28 JUNE 2021

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ‌. ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ತಳಗುಪ್ಪ – ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಯುವಕ ಸಿಲುಕಿದ್ದಾನೆ.

ಹೇಗಾಯ್ತು ಘಟನೆ?

ಸಿದ್ದಾಪುರ ತಾಲೂಕಿನ ನವೀನ್ (18) ರೈಲಿಗೆ ಸಿಲುಕಿದ ಯುವಕ.

ಪ್ಲಾಟ್‌ಫಾರಂ ಜಾರುತ್ತಿದ್ದರಿಂದ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಪ್ಲಾಟ್‌ಫಾರಂನಿಂದ ಜಾರಿದ ನವೀನ್ ರೈಲಿನ ಕೆಳಗೆ ಬಿದ್ದಿದ್ದಾನೆ. ಈ ವೇಳೆ ರೈಲು ಚಲಿಸಿದ್ದರಿಂದ ನವೀನ್ ಕಾಲು ಮತ್ತು ಕೈಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ‌ ಇನ್ನಷ್ಟೆ ತಿಳಿದು ಬರಬೇಕಿದೆ.

Leave a Comment