ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವಿನೋಬಗರದ 60 ಅಡಿ ರಸ್ತೆಯಲ್ಲಿ ನಿಲ್ಲಿಸಿದ್ದ ಪಲ್ಸರ್ ಎನ್ಎಸ್ 200 ಬೈಕ್ ಕಳ್ಳತನವಾಗಿದೆ. ರಾತ್ರಿ ನಿಲ್ಲಿಸಿದ್ದ ಬೈಕ್ ಮಧ್ಯರಾತ್ರಿಯೊಳಗೆ ಕಣ್ಮರೆಯಾಗಿದೆ.
ಜೀವನ್ ಎಂಬುವವರಿಗೆ ಸೇರಿದ ಬೈಕನ್ನು ಖದೀಮರು ಕದ್ದೊಯ್ದಿದ್ದಾರೆ. ಜಟ್ ಪಟ್ ನಗರದ ಸಮೀಪ ವಿನೋಬಗರ 60 ಅಡಿ ರಸ್ತೆಯಲ್ಲಿ ಬೈಕ್ ನಿಲ್ಲಿಸಲಾಗಿತ್ತು.
ಹೇಗಾಯ್ತು ಘಟನೆ?
ಜೀವನ್ ತನ್ನ ಸ್ನೇಹಿತನೊಂದಿಗೆ ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ತೆರಳಿದ್ದರು. ಹಾಗಾಗಿ ರಾತ್ರಿ 10.30ರ ಹೊತ್ತಿಗೆ ವಿನೋಬನಗರದ 60 ಅಡಿ ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದರು. ನಡುರಾತ್ರಿ 2 ಗಂಟೆಗೆ ರಿಪ್ಪನ್ ಪೇಟೆಯಿಂದ ಹಿಂತಿರುಗಿದಾಗ ಬೈಕ್ ಕಾಣಿಸಲಿಲ್ಲ.
ಘಟನೆ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






