ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 4 ಆಗಸ್ಟ್ 2021
ಶಿವಮೊಗ್ಗ ಜಿಲ್ಲೆಯ ರಾಜಕಾರಣದಲ್ಲಿ ತೀರ್ಥಹಳ್ಳಿ ಕ್ಷೇತ್ರದ್ದು ವಿಭಿನ್ನ ಹೆಸರು. ಈ ಕ್ಷೇತ್ರದಿಂದ ಆಯ್ಕೆಯಾದವರು ವಿಧಾನಸಭೆಯಲ್ಲಿ ತಮ್ಮ ಬೌದ್ಧಿಕತೆ, ಸಮಜಾಮುಖಿ ಯೋಚನೆಗಳು, ಜನಪರ ಕಾಳಜಿಯುಳ್ಳ ಚರ್ಚೆಗಳಿಂದ ಜನಜನಿತರಾಗಿದ್ದಾರೆ.
ಅಷ್ಟೆ ಅಲ್ಲ, ಇಲ್ಲಿಂದ ಆಯ್ಕೆಯಾದವರು ವಿಧಾನಸಭೆಯಲ್ಲಿ ಸರ್ವ ಜವಾಬ್ದಾರಿಗಳನ್ನು ನಿಭಾಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ಶಾಸಕರಾಗಿ ಮಾತ್ರವಲ್ಲ ಮುಖ್ಯಮಂತ್ರಿಯಾಗಿ, ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ, ವಿಧಾನಸಭೆಯ ಸ್ಪೀಕರ್ ಕೂಡ ಆಗಿದ್ದರು.
ಯಾರೆಲ್ಲ ಯಾವ ಜವಾಬ್ದಾರಿ ನಿಭಾಯಿಸಿದ್ದಾರೆ?
ತೀರ್ಥಹಳ್ಳಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಡಿದಾಳು ಮಂಜಪ್ಪ ಅವರು 1956ರಲ್ಲಿ ಮೈಸೂರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. 73 ದಿನಗಳು ಕಡಿದಾಳು ಮಂಜಪ್ಪ ಅವರು ಆಡಳಿತ ನಡೆಸಿದ್ದರು.
1983ರಲ್ಲಿ ಆಯ್ಕೆಯಾಗಿದ್ದ ಡಿ.ಬಿ.ಚಂದ್ರೇಗೌಡ ಅವರು ವಿಧಾನಸಭೆಯ ಸ್ಪೀಕರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. 1983 ರಿಂದ 1985ರವರೆಗೆ ಅವರು ಸ್ಪೀಕರ್ ಆಗಿದ್ದರು.
ಇದನ್ನೂ ಓದಿ | ಸಾಲು ಸಾಲು ಸೋಲು, ಆರು ತಿಂಗಳು ಜೈಲು, ತಾಳ್ಮೆಗೆ ಸಿಕ್ತು ಫಲ, ಸಚಿವ ಆರಗ ಜ್ಞಾನೇಂದ್ರ ಬಗ್ಗೆ ತಿಳಿಬೇಕಾದ ಸಂಗತಿಗಳು ಇಲ್ಲಿವೆ
1989ರಲ್ಲಿ ತೀರ್ಥಹಳ್ಳಿಯಲ್ಲಿ ಪುನಃ ಗೆಲುವು ಕಂಡ ಡಿ.ಬಿ.ಚಂದ್ರೇಗೌಡ ಅವರು ವಿರೋಧ ಪಕ್ಷದ ನಾಯಕರಾಗಿ ಜವಾಬ್ದಾರಿ ನಿಭಾಯಿಸಿದ್ದರು.
2013ರಲ್ಲಿ ಆಯ್ಕೆಯಾಗಿದ್ದ ಕಿಮ್ಮನೆ ರತ್ನಾಕರ್ ಅವರು ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದರು.
ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಕ್ಯಾಬಿನೆಟ್ನಲ್ಲಿ ಆರಗ ಜ್ಞಾನೇಂದ್ರ ಅವರು ಸಚಿವರಾಗಿದ್ದಾರೆ.
ಈವರೆಗೂ ಹನ್ನೊಂದು ಶಾಸಕರು
ತೀರ್ಥಹಳ್ಳಿ ಕ್ಷೇತ್ರದಿಂದ ಈವರೆಗೂ ಹನ್ನೊಂದು ಶಾಸಕರು ಆಯ್ಕೆಯಾಗಿದ್ದಾರೆ. ಮೈಸೂರು ರಾಜ್ಯವಿದ್ದಾಗ, ಮೊದಲ ವಿಧಾಸಭೆಗೆ ತೀರ್ಥಹಳ್ಳಿಯಿಂದ ಕಡಿದಾಳು ಮಂಜಪ್ಪ ಅವರು ಆಯ್ಕೆಯಾಗಿದ್ದರು.
ಕರ್ನಾಟಕ ರಾಜ್ಯ ರಚನೆಯಾದ ಬಳಿಕ ತೀರ್ಥಹಳ್ಳಿ ಕ್ಷೇತ್ರದಿಂದ 1957ರಲ್ಲಿ ಎ.ಆರ್.ಭದ್ರಿನಾರಾಯಣ, 1962ರಲ್ಲಿ ಶಾಂತವೇರಿ ಗೋಪಾಲ ಗೌಡ, 1967ರಲ್ಲಿ ಜಿ.ಜಿ.ಶಾಂತವೇರಿ, 1972ರಲ್ಲಿ ಕೋಣಂದೂರು ಲಿಂಗಪ್ಪ, 1978ರಲ್ಲಿ ಕಡಿದಾಳು ದಿವಾಕರ, 1983 ಮತ್ತು 1989ರಲ್ಲಿ ಡಿ.ಬಿ.ಚಂದ್ರೇಗೌಡ, 1985ರಲ್ಲಿ ಪಟ್ಮಕ್ಕಿ ರತ್ನಾಕರ್ ಆಯ್ಕೆಯಾಗಿದ್ದರು.
1994, 1999, 2004, 2018ರಲ್ಲಿ ಆರಗ ಜ್ಞಾನೇಂದ್ರ, 2008 ಮತ್ತು 2013ರಲ್ಲಿ ಕಿಮ್ಮನೆ ರತ್ನಾಕರ್ ಅವರು ಶಾಸಕರಾಗಿದ್ದರು.
ತೀರ್ಥಹಳ್ಳಿ ಕ್ಷೇತ್ರದಲ್ಲಿ ಅತಿ ಹೆಚ್ಚು ಭಾರಿ ಶಾಸಕರಾದ ಹೆಗ್ಗಳಿಗೆ ಆರಗ ಜ್ಞಾನೇಂದ್ರ ಅವರದ್ದಾಗಿದೆ. ಈಗ ಸಚಿವ ಸ್ಥಾನ ಒಲಿದು ಬಂದಿದೆ. ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಇದು ಅತ್ಯಂತ ಮಹತ್ವದ ಅವಕಾಶವಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
- ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ 3 ದಿನ ಫಲಪುಷ್ಪ ಪ್ರದರ್ಶನ, ಈ ವರ್ಷದ ವಿಶೇಷತೆ ಏನು?
- 2022ರಲ್ಲಿ ಅಪ್ಲೋಡ್ ಆಗಿದ್ದ ವಿಡಿಯೋ, ಶಿವಮೊಗ್ಗದ ಯುವಕನಿಗೆ ಈಗ ಶುರು ಸಂಕಷ್ಟ
- ಅಡಿಕೆ ಧಾರಣೆ | 22 ಜನವರಿ 2025 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್?
- ಸೈನ್ಸ್ ಮೈದಾನ, ಸಂಜೆ ಪಾರ್ಕಿಂಗ್ ಸ್ಥಳಕ್ಕೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ
- ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್ ಕಾಗೋಡು ತಿಮ್ಮಪ್ಪ
- ಕುವೆಂಪು ವಿವಿ, 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಹೇಗಿತ್ತು 34ನೇ ಘಟಿಕೋತ್ಸವ?