ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021
ತುಂಗಾ ಜಲಾಶಯ ಭರ್ತಿಯಾಗಿದ್ದು, ನೀರು ಹೊರಬಿಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿರುವುದು ಮತ್ತು ಇನ್ನೆರಡು ದಿನ ಮಳೆ ಮುನ್ಸೂಚನೆ ಇರುವುದರಿಂದ ಸ್ವಲ್ಪ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.
ಸದ್ಯ ಜಲಾಶಯಕ್ಕೆ 800 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಜಲಾಶಯದ ಭರ್ತಿಯಾಗುವ ಹಂತದಲ್ಲಿದೆ. ಆದ್ದರಿಂದ 535 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಜಲಾಶಯದ ಕ್ರಸ್ಟ್ ಗೇಟ್ಗಳನ್ನು ತೆಗೆದಿಲ್ಲ. ಬದಲಾಗಿ ಪವರ್ ಹೌಸ್ ಮೂಲಕ ನೀರನ್ನು ಹೊರ ಹರಿಸಲಾಗುತ್ತಿದೆ. ಮಳೆ ಪ್ರಮಾಣದ ಆಧಾರದ ಮೇಲೆ ಜಲಾಶಯದ ಹೊರಹರಿವು ನಿಗದಿಪಡಿಸಲಾಗುತ್ತದೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]