ಶಿವಮೊಗ್ಗ ಲೈವ್.ಕಾಂ | SHIMOGA | 19 ಫೆಬ್ರವರಿ 2020
ಯುವತಿಯ ಅಪರಹಣಕ್ಕೆ ಸಂಬಂಧಿಸಿ 19 ವರ್ಷಗಳ ಹಿಂದಿನ ಪ್ರಕರಣದ ಆರೋಪಿ ಶಮಿ ಅಲಿಯಾಸ್ ಮೊಹಮದ್ ಅಲಿಯನ್ನು ಕೇರಳದಲ್ಲಿ ಬಂಧಿಸುವಲ್ಲಿ ಜೋಗ ಪೊಲೀಸರು ಯಶಸ್ವಿಯಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಮಿ ಕಾರ್ಗಲ್‌ನವನು. 2001ರಲ್ಲಿ ಕುಂಸಿ ಮೂಲದ ಯುವತಿಯೊಬ್ಬಳನ್ನು ಅಪಹರಿಸಿ ಕೆಲ ದಿನಗಳ ಕಾಲ ಅಜ್ಞಾತ ಸ್ಥಳದಲ್ಲಿಟ್ಟ ಆರೋಪ ಈತನ ಮೇಲಿತ್ತು. ಪ್ರಕರಣದಲ್ಲಿ ಐವರನ್ನು ಆರೋಪಿಗಳೆಂದು ಗುರುತಿಸಲಾಗಿತ್ತು.
ನಾಲ್ವರನ್ನು ಈಗಾಗಲೇ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆದರೆ ಶಮಿ ಮಾತ್ರ ಪ್ರಕರಣ ನಡೆದ ದಿನ ನಾಪತ್ತೆಯಾದವನು ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಕೇರಳದ ಕೊಡೆಕ್ಕಲ್’ನಲ್ಲಿ ತರಕಾರಿ ಮಾರಾಟ ಮಾಡಿಕೊಂಡಿದ್ದಾನೆಂಬ ಖಚಿತ ಮಾಹಿತಿ ಮೇರೆಗೆ ತೆರಳಿದ ಜೋಗ ಠಾಣೆ ಪಿಎಸ್‌ಐ ನಿರ್ಮಲಾ, ಎಎಸ್‌ಐ ನಾಗಪ್ಪ, ಮುಖ್ಯಪೇದೆ ಘನಶ್ಯಾಮ್, ಪೇದೆ ಲೋಕೇಶ್ ತಂಡ ಶಫಿಯನ್ನು ಬಂಧಿಸಿದೆ. ಆರೋಪಿಯನ್ನು ಮಂಗಳವಾರ ಸಾಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]