ಡಿಸಿ ಅನುಮತಿ ಇಲ್ಲದೆ ಡ್ಯಾಂಗಳಿಂದ ಹರಿಸುವಂತಿಲ್ಲ ನೀರು, ಕುಡಿಯುವ ನೀರು ಪೂರೈಸುವ ಟ್ಯಾಂಕರ್’ಗೆ ಸಾಫ್ಟ್’ವೇರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 9 ಮಾರ್ಚ್ 2020

ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳ ಕಾಲ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಮುನ್ನಚ್ಚರಿಕೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆ ನಡೆಸಿದರು.

ಜಿಲ್ಲೆಯಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ಪರಿಸ್ಥಿತಿಯಿಲ್ಲ. ಆದರೂ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಎದುರಾಗಬಹುದಾದ 316 ಗ್ರಾಮಗಳನ್ನು ಗುರುತಿಸಲಾಗಿದೆ. ಈ ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ತಾತ್ಕಾಲಿಕ ಕಾಮಗಾರಿಗಳನ್ನು ಕೈಗೊಳ್ಳುವ ಬದಲು ನೀರಿನ ಮೂಲವನ್ನು ಗುರುತಿಸಿ ಪೈಪ್‍ಲೈನ್ ಅಳವಡಿಕೆಯಂತಹ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಲು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಗ್ರಾಮೀಣ ನೀರು ಪೂರೈಕೆ ಇಲಾಖೆ ಸೇರಿದಂತೆ ಎಲ್ಲಾ ಕುಡಿಯುವ ನೀರಿನ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಪ್ರಸ್ತುತ ಕಾಮಗಾರಿ ಪೂರ್ಣಗೊಂಡು ಪ್ರಾಯೋಗಿಕ ನೀರು ಪೂರೈಕೆ ನಡೆಯುತ್ತಿರುವ ಎಲ್ಲಾ 3 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಆದಷ್ಟು ಬೇಗನೆ ಕಾರ್ಯಾರಂಭ ಮಾಡಬೇಕು ಎಂದು ಹೇಳಿದರು.

87824331 1070180693343350 278202671192604672 o.jpg? nc cat=103& nc sid=8024bb& nc eui2=AeFjwKOoathz sAV1PQR85Y6suLjQKOo57eRDf2VqjdHK0i1SvTz 48FQ5DNgqCxc4jV1WuCl4p3tI08lPIZxYcXFzbamRoIxRd2zd OvFxguw& nc ohc=WCQEmfOy7hcAX xikM9& nc ht=scontent.fblr11 1

ಟ್ಯಾಂಕರ್ ಸಾಫ್ಟ್‍ವೇರ್

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಟ್ಯಾಂಕರ್ ಸಾಫ್ಟ್‍ವೇರ್ ರೂಪಿಸಿದ್ದು, ಈ ಕುರಿತು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಮಾಹಿತಿಯನ್ನು ಒದಗಿಸಬೇಕು. ಉಪವಿಭಾಗಾಧಿಕಾರಿ ಮಟ್ಟದಲ್ಲಿ ಟ್ಯಾಂಕರ್ ನೀರು ಸರಬರಾಜು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಕಳೆದ ವರ್ಷದ ಕುಡಿಯುವ ನೀರಿನ ಕಾಮಗಾರಿಗಳ ಬಿಲ್ಲು ಪಾವತಿಗೆ ಬಾಕಿ ಇದ್ದರೆ ಅದನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಅನುಮತಿ ಇಲ್ಲದೆ ನೀರು ಬಿಡಬಾರದು

ಜಿಲ್ಲೆಯ ಪ್ರಮುಖ ಜಲಾಶಯಗಳಾದ ಗಾಜನೂರು, ಭದ್ರಾ, ಅಂಜನಾಪುರ, ಅಂಬ್ಲಿಗೋಳ ಜಲಾಶಯಗಳಲ್ಲಿ ಜೂನ್‍ವರೆಗೆ ಕುಡಿಯುವ ನೀರು ಪೂರೈಕೆಗೆ ನೀರು ಲಭ್ಯವಿದೆ. ಆದರೆ ಈಗಾಗಲೇ ನಿಗದಿಯಾಗಿರುವ ನೀರನ್ನು ಬಿಟ್ಟು, ಬೇರೆ ಯಾವುದೇ ಕಾರಣಕ್ಕೂ ನೀರನ್ನು ಜಿಲ್ಲಾಧಿಕಾರಿ ಅನುಮತಿ ಪಡೆಯದೇ ಬಿಡಬಾರದು. ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಮುನ್ನೆಚ್ಚರಿಕೆ ವಹಿಸಬೇಕು. ನೀರಿನ ಲಭ್ಯತೆ ಬಗ್ಗೆ ಪ್ರತಿ 15 ದಿನಗಳಿಗೊಮ್ಮೆ ವರದಿಯನ್ನು ಸಲ್ಲಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ, ಯೋಜನಾ ನಿರ್ದೇಶಕ ಡಾ.ನಾಗೇಂದ್ರ ಹೊನ್ನಳ್ಳಿ, ಉಪ ವಿಭಾಗೀಯ ಆಯುಕ್ತರಾದ ನಾಗರಾಜ್, ಪ್ರಕಾಶ್ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 9, 2020

Leave a Comment