ಶಿವಮೊಗ್ಗ ಸಿಟಿಯ ಹಲವು ಕಡೆ ಇನ್ಮುಂದೆ ವಾಹನ ನೋ ಪಾರ್ಕಿಂಗ್, ಕೆಲವು ಕಡೆ ಒನ್ ವೇ, ಆದೇಶ ಉಲ್ಲಂಘಿಸಿದರೆ ಬೀಳುತ್ತೆ ದಂಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 16 ಮಾರ್ಚ್ 2020

ಶಿವಮೊಗ್ಗ ನಗರದಲ್ಲಿ ಸುಗಮ ಸಂಚಾರ ಹಾಗೂ ಆಕಸ್ಮಿಕ ಅಫಘಾತಗಳನ್ನು ನಿಯಂತ್ರಿಸಲು ವಿವಿಧ ರಸ್ತೆಗಳಲ್ಲಿ ವಾಹನ ನಿಲುಗಡೆ, ವೇಗಮಿತಿ ಮತ್ತು ಏಕಮುಖ ಸಂಚಾರ ವ್ಯವಸ್ಥೆ ಕಲ್ಪಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಯಾವ್ಯಾವ ರಸ್ತೆಯಲ್ಲಿ ಏನೆಲ್ಲ ಬದಲಾವಣೆಯಾಗಿದೆ?

ಶಿವಮೊಗ್ಗ ನಗರದ ಅಶೋಕ ಸರ್ಕಲ್, ಅಮೀರ್ ಅಹ್ಮದ್ ಸರ್ಕಲ್, ಗೋಪಿ ಸರ್ಕಲ್, ಜೈಲ್ ಸರ್ಕಲ್, ವಿನೋಬ ನಗರ ಪೊಲೀಸ್ ಚೌಕಿ ಸರ್ಕಲ್ ಮತ್ತು ಹೆಲಿಪ್ಯಾಡ್ ಸರ್ಕಲ್ ಸೇರಿದಂತೆ ಒಟ್ಟು ಪ್ರಮುಖ 6 ಸರ್ಕಲ್’ಗಳ ವ್ಯಾಪ್ತಿಯಲ್ಲಿ 100ಮೀ. ಅಂತರದವರೆಗೆ ಎಲ್ಲಾ ರೀತಿಯ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.

ಜೈಲ್ ರಸ್ತೆಯಲ್ಲಿ ಹಗಲು ಸಮಯದಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ ಮತ್ತು ರಸ್ತೆಯ ಎರಡು ಬದಿಯಲ್ಲಿ ದಿನಬಿಟ್ಟು ದಿನ ವಾಹನಗಳ ನಿಲುಗಡೆಗೆ ಸೂಚಿಸಲಾಗಿದೆ.

ಜಿಲ್ಲಾ ವ್ಯಾಪ್ತಿಯಲ್ಲಿನ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‍ನಿಲ್ದಾಣಗಳ ಸುತ್ತಮುತ್ತ ಖಾಸಗಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.

ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ, ಹೊಳಲೂರು ಬಸ್‍ನಿಲ್ದಾಣಗಳ ಸುತ್ತಮುತ್ತ 500ಮೀ. ವ್ಯಾಪ್ತಿಯಲ್ಲಿ ಖಾಸಗಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.

ವಿನೋಬನಗರದ ಪೊಲೀಸ್ ಚೌಕಿಯಿಂದ ರೈಲ್ವೇ ಟ್ರ್ಯಾಕ್ ಕಡೆಗೆ ಹೋಗುವ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇದಿಸಿದೆ.

BH Road Aamir Ahmed Circle 1 1

KSRTC ಬಸ್ ನಿಲ್ದಾಣದಲ್ಲಿರುವ ಪಾರ್ಕಿಂಗ್ ಸ್ಥಳವನ್ನು ವಾಣಿಜ್ಯ ಸಂಕೀರ್ಣಗಳಿಗೆ ಬರುವ ಗ್ರಾಹಕರಿಗೆ ನೀಡಬೇಕು.

ಬಿ.ಹೆಚ್. ರಸ್ತೆಯ ಲಕ್ಷ್ಮೀ ಮೆಡಿಕಲ್ ನಿಂದ ಎನ್.ಟಿ. ರಸ್ತೆ ಉರ್ದು ಸ್ಕೂಲ್‍ವರೆಗಿನ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಎನ್.ಟಿ.ರಸ್ತೆಯ ಒಂದನೇ ತಿರುವಿನಲ್ಲಿ ಅಶೋಕ ಹೋಟೆಲ್‍ನಿಂದ ಬಲಿಜ ಸೊಸೈಟಿಯವರೆಗೆ ರಸ್ತೆಯ 2 ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಿದೆ.

ದುರ್ಗಿಗುಡಿ ಮುಖ್ಯರಸ್ತೆಯಲ್ಲಿ ಎಲ್.ಟಿ.ಕಾಂಪ್ಲೆಕ್ಸ್‍ನಿಂದ ಪ್ರತಾಪ್ ಆರ್ಕೇಡ್‍ವರೆಗಿನ ರಸ್ತೆಯ 2 ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯ ಸಂದೇಶ ಮೋಟಾರ್ಸ್‍ನಿಂದ ಆಟೋ ಕಾಂಪ್ಲೆಕ್ಸ್‍ಗೆ ಹೋಗುವ ರಸ್ತೆಯವರೆಗಿನ ಮತ್ತು ಆಯನೂರು ಗೇಟಿನಿಂದ ಗೋಪಾಳ 100 ಅಡಿ ರಸ್ತೆಗೆ ಸೇರುವ ರಸ್ತೆಯಲ್ಲಿ ಎಸ್.ಬಿ.ಎಂ.ಕ್ರಾಸ್‍ವರೆಗೆ ಭಾರೀ ವಾಹನಗಳ ಸಂಚಾರವನ್ನು ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ನಿಷೇಧಿಸಲಾಗಿದೆ.

ಸಾಗರ ರಸ್ತೆಯ ಇಕ್ಕೆಲಗಳಲ್ಲಿ ಫುಟ್‍ಪಾತ್ ಮೇಲೆ ವಾಹನ ನಿಲುಗಡೆ ನಿಷೇಧಿಸಿದೆ ಹಾಗೂ ಹಾಲ್ಕೊಳ ಸರ್ಕಲ್‍ನ ಸುತ್ತಮುತ್ತ 100ಮೀ. ಅಂತರದವರೆಗೆ ವಾಹನ ನಿಲುಗಡೆ ನಿಷೇಧಿಸಿದೆ.

80396545 763981690748410 5256151814016860160 n.jpg? nc cat=103& nc sid=8024bb& nc ohc=arsxoff lTcAX9so00h& nc ht=scontent.fblr11 1

ನಗರದ ಅಶೋಕ ಹೋಟೆಲ್‍ನಿಂದ ಲೋಕೋಪಯೋಗಿ ಇಲಾಖೆ ಕಚೇರಿಯವರೆಗೆ ಮತ್ತು ಲೋಕೋಪಯೋಗಿ ಕಚೇರಿಯಿಂದ ಬಿ.ಹೆಚ್.ರಸ್ತೆಯವರೆಗೆ ಏಕಮುಖ ಸಂಚಾರ ಮತ್ತು ಸದರಿ ರಸ್ತೆಯಲ್ಲಿ ಒಂದು ಬದಿ ವಾಹನಗಳ ನಿಲುಗಡೆಗೊಳಿಸಬಹುದಾಗಿದೆ.

ಮಹಾನಗರಪಾಲಿಕೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ಮತ್ತು ಮುಖ್ಯರಸ್ತೆ ಹಾಗೂ ಕಾರ್ಪೋರೇಶನ್ ರಸ್ತೆಗಳಲ್ಲಿ ವೇಗಮಿತಿ ನಿಗಧಿಪಡಿಸಿ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ.

ನಗರದ ಶಂಕರಮಠ ಸರ್ಕಲ್‍ನಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್‍ವರೆಗೆ ಹೊನ್ನಾಳಿ ಕಡೆಗೆ ಹೋಗುವ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ದಿನಬಿಟ್ಟು ದಿನ ಪಾರ್ಕಿಂಗ್ ಮತ್ತು ನೋಪಾರ್ಕಿಂಗ್‍ಗೆ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯಲ್ಲಿ ರಸ್ತೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ನೋಟೀಸ್ ಜಾರಿ ಮಾಡುವ ಸಂಬಂಧ ಅಳವಡಿಸಲಾಗಿರುವ, ಆಟೋಮೇಶನ್ ತಂತ್ರಾಂಶದ ನವೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 4.50ಲಕ್ಷ ರೂ. ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.  

70084680 690399218106658 943534032086368256 n.jpg? nc cat=107& nc sid=8024bb& nc ohc=00hgUkVDcokAX Ls9h& nc ht=scontent.fblr11 1

ಫೋನ್ ನಂಬರ್ ಇರುವ ಮಾಹಿತಿ ಫಲಕ

ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅಪಘಾತಗಳು ಸಂಭವಿಸಿದಾಗ ಸಾರ್ವಜನಿಕರ ಮಾಹಿತಿಗಾಗಿ ಹತ್ತಿರದ ಆಸ್ಪತ್ರೆ, ಪೊಲೀಸ್ ಸ್ಟೇಷನ್ ಅಥವಾ ಜಿಲ್ಲಾ ಕಂಟ್ರೋಲ್ ರೂಂನ ದೂರವಾಣಿ, ಮೊಬೈಲ್ ನಂಬರ್’ಗನ್ನು ಒಳಗೊಂಡ ಮಾಹಿತಿ ಫಲಕಗಳನ್ನು ಅಳವಡಿಸಲು ಉದ್ದೇಶಿಸಲಾಗಿದೆ ಎಂದೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

90202662 826131727866739 997276755997753344 o.jpg? nc cat=104& nc sid=8024bb& nc ohc=eV4S8MOqMxUAX9qbrQ9& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 16, 2020

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment