ಶಿವಮೊಗ್ಗ ಜಿಲ್ಲೆಯಾದ್ಯಂತ 20 ದಿನ ಅನಿಯಮಿತ ಲೋಡ್ ಶೆಡ್ಡಿಂಗ್, ಕಾರಣವೇನು? ಎಲ್ಲೆಲ್ಲಿ ಲೋಡ್ ಶೆಡ್ಡಿಂಗ್ ಆಗಲಿದೆ?

ಶಿವಮೊಗ್ಗ ಲೈವ್.ಕಾಂ | SHIMOGA | 26 ಮಾರ್ಚ್ 2020

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇನ್ನು 20 ದಿನ ಅನಿಯಮಿತ ಲೋಡ್ ಶೆಡ್ಡಿಂಗ್ ಆಗಲಿದೆ ಎಂದು ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

power cut graphics

ಲೋಡ್ ಶೆಡ್ಡಿಂಗ್’ಗೆ ಕಾರಣವೇನು?

ಎಂ.ಆರ್.ಎಸ್ ಶಿವಮೊಗ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ 100 ಎಂ.ವಿ.ಎ ಪರಿವರ್ತಕದಲ್ಲಿ ತಾಂತ್ರಿಕ ದೋಷವಿದೆ. ಇದರ ರಿಪೇರಿ ಕಾರ್ಯ ನಡೆಯುತ್ತಿದೆ ಎಂದು ಕೆಪಿಟಿಸಿಎಲ್ ಮೂಲಗಳು ತಿಳಿಸಿವೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Kalleshwara-Enterprises.webp

ಎಲ್ಲೆಲ್ಲಿ ಲೋಡ್ ಶೆಡ್ಡಿಂಗ್

  • ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ
  • ಶಿವಮೊಗ್ಗ ತಾಲೂಕಿನ ಕುಂಸಿ, ಆಯನೂರು ಭಾಗ
  • ಶಿವಮೊಗ್ಗ ನಗರದ ಭಾಗಶಃ ಪ್ರದೇಶಗಳು
  • ಸಾಗರ ತಾಲೂಕಿನ ವಿವಿಧೆಡೆ
  • ಹೊಸನಗರ ತಾಲೂಕಿನ ಹಲವು ಕಡೆ ವಿದ್ಯತ್ ವತ್ಯಯವಾಗಲಿದೆ

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment