ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 30 ಮಾರ್ಚ್ 2020
ದುಬಾರಿ ಬೆಲೆಗೆ ತರಕಾರಿ ಮಾರುತ್ತಿದ್ದ ಮಾರಾಟಗಾರರೊಬ್ಬರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸಿದ್ದಕ್ಕೆ ವ್ಯಾಪಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
ಗೋಪಾಳ ಮುಖ್ಯ ರಸ್ತೆಯಲ್ಲಿರುವ ತರಕಾರಿ ಅಂಗಡಿ ಶಿವಮೊಗ್ಗ ತಹಶೀಲ್ದಾರ್ ಮತ್ತು ಪೊಲೀಸರು ದಾಳಿ ನಡೆಸಿದ್ದಾರೆ. ಎಪಿಎಂಸಿ ನಿಗದಿಪಡಿಸಿದ್ದಕ್ಕಿಂತಲೂ ಹೆಚ್ಚಿನ ದರಕ್ಕೆ ತರಕಾರಿ ಮಾರಾಟ ಮಾಡುತ್ತಿರುವ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿತ್ತು.
ಮಹಾನಗರ ಪಾಲಿಕೆಯಿಂದ ಅನುಮತಿಯನ್ನೇ ಪಡೆಯದೆ ಅಂಗಡಿ ನಡೆಸುತ್ತಿರುವುದು ದಾಳಿ ವೇಳೆ ಬೆಳಕಿಗೆ ಬಂದಿದೆ. ಈ ಹಿನ್ನೆಯಲ್ಲಿ ಅಂಗಡಿ ಮಾಲೀಕ ಶರತ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.
ತುಂಗಾ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188 ಮತ್ತು ಅಗತ್ಯ ವಸ್ತುಗಳ ನಿಯಂತ್ರಣ ಕಾಯ್ದೆ ಕಲಂ 3 ಮತ್ತು 7ರ ಅನ್ವಯ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















