
ಶಿವಮೊಗ್ಗ ಲೈವ್.ಕಾಂ | THIRTHAHALLI | 06 ಏಪ್ರಿಲ್ 2020
ಕರೋನ ಭೀತಿಯ ನಡುವೆ ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಈ ವರ್ಷದಲ್ಲಿ ಕೆಎಫ್’ಡಿಗೆ ಬಲಿಯಾದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ತೀರ್ಥಹಳ್ಳಿ ತಾಲೂಕು ಉಡುಕೆರೆ ಗ್ರಾಮದ ಸುಬ್ರಹ್ಮಣ್ಯ (52) ಮಂಗನ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಮಾರ್ಚ್ 30ರಂದು ಸುಬ್ರಹ್ಮಣ್ಯ ಅವರಿಗೆ ಕೆಎಫ್’ಡಿ ಇರುವುದು ದೃಢಪಟ್ಟಿತ್ತು. ಅಂದಿನಿಂದಲೂ ಸುಬ್ರಹ್ಮಣ್ಯ ಅವರು ಮಣಿಪಾಲದ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಬ್ರಹ್ಮಣ್ಯ ಅವರು ಕೊನೆಯುಸಿರೆಳೆದಿದ್ದಾರೆ.
ಈತನಕ 132 ಜನರಲ್ಲಿ ಕೆಎಫ್’ಡಿ
ಶಿವಮೊಗ್ಗ ಜಿಲ್ಲೆಯಲ್ಲಿ ಈ ತನಕ 132 ಜನರಲ್ಲಿ ಕೆಎಫ್’ಡಿ ಇರುವುದು ದೃಢವಾಗಿದೆ. ಈ ಪೈಕಿ ತೀರ್ಥಹಳ್ಳಿಯ 105, ಸಾಗರದ 26, ಹೊಸನಗರದ ಒಬ್ಬರಲ್ಲಿ ಕೆಎಫ್’ಡಿ ಇದೆ ಎಂದು ತಿಳಿದು ಬಂದಿದೆ. ಇಲ್ಲಿಯವರೆಗೆ ಐದು ಮಂದಿ ಮೃತಪಟ್ಟಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200