ಲಾಕ್’ಡೌನ್ ಸಂದರ್ಭ
ವಾಟ್ಸಪ್, ಫೇಸ್’ಬುಕ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ನೀಡುವ ಮೆಸೇಜುಗಳನ್ನು
ಫಾರ್ವರ್ಡ್ ಮಾಡುತ್ತಿದ್ದ ಇಬ್ಬರ ವಿರುದ್ಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನ್ಯಧರ್ಮೀಯರ ಭಾವನೆಗೆ
ಧಕ್ಕೆ ಉಂಟು ಮಾಡುವಂತಹ ಕೋಮು ಪ್ರಚೋದನಕಾರಿ ವಿಡಿಯೋಗಳನ್ನು ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಷೇರ್
ಮಾಡುವಂತಿಲ್ಲ. ಹೀಗೆ ಮಾಡಿ ಸಾಮಾಜಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡುವವರ ವಿರುದ್ಧ
ಪ್ರಕರಣ ದಾಖಲಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರೂಪ್ ಅಡ್ಮಿನ್’ಗಳೇ
ಎಚ್ಚರ
ಇಂತಹ ಮೆಸೇಜುಗಳು
ವಾಟ್ಸಪ್ ಗ್ರೂಪ್’ಗಳಲ್ಲಿ ಫಾರ್ವರ್ಡ್ ಮಾಡಿದರೆ ಗ್ರೂಪ್ ಅಡ್ಮಿನ್’ಗಳೇ ಹೊಣೆಗಾರರಾಗುತ್ತಾರೆ. ಅವರ
ವಿರುದ್ಧವು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ
ಸುದ್ದಿಗಾಗಿ ಕರೆ ಮಾಡಿ 9964634494
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ