ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 13 ಏಪ್ರಿಲ್ 2020
ಕೇರಳದಿಂದ ತರಕಾರಿ ಲಾರಿಯಲ್ಲಿ ಭದ್ರಾವತಿಗೆ ಬಂದು ಪರಿಚಯದವರ ಮನೆಯಲ್ಲಿದ್ದ ವ್ಯಕ್ತಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, 28 ದಿನ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೇರಳದ ಕಾಸರಗೋಡು ಜಿಲ್ಲೆಯಿಂದ ತಬ್ಬೀರ್ ಸಾಬ್ (55) ಎಂಬಾತ ಭದ್ರಾವತಿಗೆ ಆಗಮಿಸಿದ್ದಾನೆ. ಈತ ಏಪ್ರಿಲ್ 10ರಂದು ದೊಣಬಘಟ್ಟದ ಪರಿಚಯದವರ ಮನೆಗೆ ಬಂದಿದ್ದ. ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೆ ಆರೋಗ್ಯ ಇಲಾಖೆ ಅಧಿಕಾರಿಗಳು ತಬ್ಬೀರ್ ಸಾಬ್‍ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.
28 ದಿನ ಕ್ವಾರಂಟೈನ್
ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕರೋನ ಶಂಕಿತ ಕೇಸ್‍ಗಳು ಹೆಚ್ಚಿವೆ. ಈ ಹಿನ್ನೆಯಲ್ಲಿ ತಬ್ಬೀರ್‍ಸಾಬ್‍ನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಜ್ವರದ ಲಕ್ಷಗಳಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ 28 ದಿನ ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]