ಶಿವಮೊಗ್ಗ ಲೈವ್.ಕಾಂ | SHIMOGA | 19 ಏಪ್ರಿಲ್ 2020
ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬುವುದು ಸೇರಿದಂತೆ ಕಾಲೇಜಿನಲ್ಲಿ ಸೌಲಭ್ಯಗಳನ್ನು ಉತ್ತಮಪಡಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
133 ಹುದ್ದೆ ಭರ್ತಿಗೆ ಕ್ರಮ
ಮೆಡಿಕಲ್ ಕಾಲೇಜಿನಲ್ಲಿ ಖಾಲಿಯಿರುವ ಸಿ ದರ್ಜೆಯ 133 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ನಿಯಮಾವಳಿಯನ್ನು ನೇಮಕಾತಿಯಲ್ಲಿ ಪಾಲಿಸಬೇಕು. ಉಳಿದ ಖಾಯಂ ಹುದ್ದೆಗಳ ನೇಮಕಾತಿಗಾಗಿ ಆದಷ್ಟು ಬೇಗನೆ ಇಲಾಖೆಯ ನೇಮಕಾತಿ ಮತ್ತು ವೃಂದ ನಿಯಮಾವಳಿಯನ್ನು ರಚಿಸುವಂತೆ ಅವರು ಸಭೆಯಲ್ಲಿ ಉಪಸ್ಥಿತರಿದ್ದ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಜಿ.ಗಿರೀಶ್ ಅವರು ಸೂಚನೆ ನೀಡಿದರು.
ರೇಡಿಯೋಲಜಿಗೆ ತಜ್ಞ ವೈದ್ಯರ ನೇಮಕಕ್ಕೆ ಸೂಚನೆ
ರೇಡಿಯೋಲಜಿ ವಿಭಾಗದ ಎಲ್ಲಾ ಉಪಕರಣಗಳು ಸಿಮ್ಸ್‍ನಲ್ಲಿ ಲಭ್ಯವಿದ್ದು, ತಜ್ಞ ವೈದ್ಯರ ನೇಮಕಾತಿ ಆಗಬೇಕಿದೆ. ಅದುವರೆಗೆ ಲಭ್ಯವಿರುವ ಬಳಕೆದಾರರ ನಿಧಿಯನ್ನು ಉಪಯೋಗಿಸಿಕೊಂಡು ತಜ್ಞ ವೈದ್ಯರ ಸೇವೆಯನ್ನು ಪಡೆಯಲು ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಬೇಕು. ಬಳಕೆದಾರರ ನಿಧಿ ಸಂಗ್ರಹವನ್ನು ಹೆಚ್ಚಿಸಲು ಕ್ರಮ ಕೈಗೊಂಡು, ಅದರ ಮೂಲಕ ಇನ್ನಷ್ಟು ಸೌಲಭ್ಯಗಳನ್ನು ಕಲ್ಪಿಸಲು ಪ್ರಯತ್ನಿಸಬೇಕು ಎಂದು ರಾಘವೇಂದ್ರ ಅವರು ಹೇಳಿದರು.
ಮಕ್ಕಳ ಪ್ರತ್ಯೇಕ ವಿಭಾಗಕ್ಕೆ ಎಂಟು ಕೋಟಿ
ತಾಯಂದಿರ ಮತ್ತು ಮಕ್ಕಳ ಪ್ರತ್ಯೇಕ ವಿಭಾಗವನ್ನು ಆರಂಭಿಸಲು 8 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇತ್ತೀಚೆಗೆ ಬೆಂಕಿ ದುರ್ಘಟನೆ ಸಂಭವಿಸಿರುವ ಮಕ್ಕಳ ವಿಭಾಗದ ದುರಸ್ತಿ ಕಾರ್ಯವನ್ನು ಎರಡು ದಿನಗಳ ಒಳಗಾಗಿ ಪೂರ್ಣಗೊಳಿಸಿ, ಸೇವೆ ಆರಂಭಿಸಲು ಪ್ರಾರಂಭಿಸಬೇಕು. ಕ್ಯಾಥ್‍ಲ್ಯಾಬ್ ಆರಂಭಿಸಲು ಈಗಾಗಲೇ ಕರೆಯಲಾಗಿರುವ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಂಸದರು ಸೂಚನೆ ನೀಡಿದರು.
ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಮಾಹಿತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಬಯೋಮೆಟ್ರಿಕ್ ವ್ಯವಸ್ಥೆಯನ್ನು ಮೆಡಿಕಲ್ ಕಾಲೇಜು ವತಿಯಿಂದ ಸಹ ಅಳವಡಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]