ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 21 ಏಪ್ರಿಲ್ 2020
ಲಾಕ್ಡೌನ್ ಅವಧಿಯಲ್ಲಿ ಮದ್ಯದಂಗಡಿಗೆ ಕನ್ನ ಹಾಕಿ ಮದ್ಯವನ್ನು ಕಳ್ಳತನ ಮಾಡಿದ್ದ ಇಬ್ಬರು ಅರೆಸ್ಟ್ ಆಗಿದ್ದಾರೆ. ಬಂಧಿತರನ್ನು ಹಸೂಡಿ ಹಕ್ಕಿಪಿಕ್ಕಿ ಕ್ಯಾಂಪ್‍ನ ರಮೇಶ್ (22), ಅಕ್ಬರ್ ಅಲಿಯಾಸ್ ರವಿ (22) ಎಂದು ಗುರುತಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಾರ್ಚ್ 23 ರಿಂದ ಏಪ್ರಿಲ್ 16ರ ನಡುವೆ ಹೊಳೆಬೆನವಳ್ಳಿಯ ಮದ್ಯದಂಗಡಿಗೆ ಕನ್ನ ಕೊರೆದು ಮದ್ಯ ಕಳ್ಳತನ ಮಾಡಿದ್ದರು. ಬಂಧನದ ವೇಳೆ ಇವರಿಂದ 10,430 ರೂ. ಮೌಲ್ಯದ ಮದ್ಯದ ಬಾಟಲಿ ಮತ್ತು ಪೌಚುಗಳು, 26 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ.
ಡಿವೈಎಸ್‍ಪಿ ಈಶ್ವರ್ ನಾಯ್ಕ್ ಮಾರ್ಗದರ್ಶನದಲ್ಲಿ ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್ಸ್‍ಪೆಕ್ಟರ್ ಸಂಜೀವ್ ಕುಮಾರ್ ನೇತೃತ್ವದಲ್ಲಿ ಪಿಎಸ್‍ಐ ಸುರೇಶ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]