ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 22 ಏಪ್ರಿಲ್ 2020
ಕರೋನ ಜಾಗೃತಿ ಮತ್ತು ಲಾಕ್ಡೌನ್ ಮಹತ್ವ ತಿಳಿಸುವ ಸಲುವಾಗಿ ಶಿವಮೊಗ್ಗದಲ್ಲಿ ಇವತ್ತು ಪೊಲೀಸರು ರೂಟ್ ಮಾರ್ಚ್ ಮಾಡಿದರು. ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ರೂಟ್ ಮಾರ್ಚ್ಗೆ ಚಾಲನೆ ನೀಡಿದರು.
ಗಮನ ಸೆಳೆದ ಕರೋನ ಪ್ರತಿಕೃತಿ
ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ಠಾಣೆ ಸಿಬ್ಬಂದಿಗಳು ಬೈಕ್ಗಳಲ್ಲಿ ರೂಟ್ ಮಾರ್ಚ್ ಮಾಡಿದರು. ಜಿಲ್ಲಾ ರಕ್ಷಣಾಧಿಕಾರಿ, ಹೆಚ್ಚುವರಿ ರಕ್ಷಣಾಧಿಕಾರಿ, ಡಿವೈಎಸ್ಪಿ, ಇನ್ಸ್ಪೆಕ್ಟರ್ಗಳು, ಸಬ್ ಇನ್ಸ್ಪೆಕ್ಟರ್ಗಳು, ಡಿಎಆರ್, ಟ್ರಾಫಿಕ್ ಠಾಣೆ ಸಿಬ್ಬಂದಿಗಳು ರೂಟ್ ಮಾರ್ಚ್ನಲ್ಲಿ ಭಾಗವಹಿಸಿದ್ದರು. ಕರೋನ ಜಾಗೃತಿಗಾಗಿ ಪೊಲೀಸ್ ವಾಹನದ ಮೇಲೆ ಕರೋನ ಪ್ರತಿಕೃತಿ ಇರಿಸಲಾಗಿತ್ತು. ಇದು ರೂಟ್ ಮಾರ್ಚ್ನಲ್ಲಿ ಎಲ್ಲರ ಗಮನ ಸೆಳೆಯಿತು.
ಚಪ್ಪಾಳೆಯ ಸ್ವಾಗತ, ಕೆಲವೆಡೆ ಹೂಮಳೆ
ಗಾಂಧಿ ಬಜಾರ್ ಸೇರಿದಂತೆ ನಗರದ ವಿವಿಧೆಡೆ ರೂಟ್ ಮಾರ್ಚ್ ಮಾಡಿದ ಪೊಲೀಸರಿಗೆ ನಾಗರೀಕರು ಚಪ್ಪಾಳೆ ಮೂಲಕ ಸ್ವಾಗತಿಸಿದರು. ತಮ್ಮ ಮನೆಯ ಬಾಲ್ಕನಿಗಳು, ಟೆರೇಸ್ ಮೇಲೆ ನಿಂತು ಚಪ್ಪಾಳೆ ಮೂಲಕ ಹುರಿದುಂಬಿಸಿದರು. ಇನ್ನು ಕೆಲವು ಕಡೆಗೆ ಹೂಮಳೆ ಸುರಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

About The Editor
ನಿತಿನ್ ಆರ್.ಕೈದೊಟ್ಲು





