ಅರ್ನಬ್ ಗೋಸ್ವಾಮಿ ವಿರುದ್ಧ ಶಿವಮೊಗ್ಗದಲ್ಲಿ ಮೊತ್ತೊಂದು ದೂರು, ಕಠಿಣ ಕ್ರಮಕ್ಕೆ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 24 ಏಪ್ರಿಲ್ 2020

ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ವಿರುದ್ಧ ಶಿವಮೊಗ್ಗದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಅನಗತ್ಯ ಮತ್ತು ಆಧಾರ ರಹಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ದೂರು ನೀಡಿದ್ದಾರೆ.  

ಜಯನಗರ ಪೊಲೀಸ್‌ ಠಾಣೆಗೆ ದೂರು ನೀಡಿರುವ ಯುವ ಕಾಂಗ್ರೆಸ್‌ ಕಾರ್ಯಕರ್ತರು, ರಿಪಬ್ಲಿಕ್‌ ಟಿವಿಯ ಪೂಚ್ತಾ ಇಂಡಿಯಾ ಕಾರ್ಯಕ್ರಮದಲ್ಲಿ ಅರ್ನಬ್‌ ಗೋಸ್ವಾಮಿ ಅವರು ಅವಹೇಳನ, ಕೋಮು ಪ್ರಚೋದಕ ಮತ್ತು ಮಾನಹಾನಿ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯುವ ಕಾಂಗ್ರೆಸ್‌ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಪ್ರವೀಣ್‌ ಕುಮಾರ್‌ ದೂರು ನೀಡಿದ್ದಾರೆ. ಯುವ ಕಾಂಗ್ರೆಸ್‌ ಕಾರ್ಯದರ್ಶಿ ರಂಜಿತ್‌, ಕಿರಣ್‌, ಪ್ರಮುಖರಾದ ರಂಗನಾಥ್‌, ಗಿರೀಶ್‌ ಸೇರಿದಂತೆ ಹಲವರಿದ್ದರು.

93578388 852483425231569 3444932249521225728 o.jpg? nc cat=105& nc sid=8024bb& nc ohc=SZVPAp1sPCMAX obk8t& nc ht=scontent.fblr1 4
92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2020

Leave a Comment