ಶಿವಮೊಗ್ಗ ಲೈವ್.ಕಾಂ | SHIKARIPURA | 27 ಏಪ್ರಿಲ್ 2020
ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಚಾಲಕನೊಬ್ಬನ ಕಾಲು ಕಟ್ ಆಗಿದೆ. ಶಿಕಾರಿಪುರ ತಾಲೂಕು ಬಳ್ಳಿಗಾವಿ ಕ್ರಾಸ್ ಬಳಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಮತ್ತು ತಡಸ ರಾಜ್ಯ ಹೆದ್ದಾರಿಯಲ್ಲಿ ಅಪಘಾತವಾಗಿದೆ. ಗೂಡ್ಸ್ ಲಾರಿ ಚಾಲಕ ಮಂಜುನಾಥ್ ಅವರ ಕಾಲು ಕಟ್ ಆಗಿದೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೋರ್‌ವೆಲ್ ಲಾರಿ ಶಿಕಾರಿಪುರದ ಕಡೆಗೆ ಹೋಗುತಿತ್ತು. ಗೂಡ್ಸ್ ಲಾರಿ ಶಿಕಾರಿಪುರದ ಕಡೆಯಿಂದ ಬರುತ್ತಿತ್ತು. ರಸ್ತೆ ಕಾಮಗಾರಿ ಪೂರ್ಣಗೊಳ್ಳದೆ ಇರುವುದೆ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]