ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 1 ಮೇ 2020
ಅಧಿಕಾರ ವಹಿಸಿಕೊಂಡು ಕೆಲವೇ ಗಂಟೆಯಲ್ಲಿ ತಹಶೀಲ್ದಾರ್ ಅವರು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ.
ಶಿವಮೊಗ್ಗದ ನೂತನ ತಹಶೀಲ್ದಾರ್ ನಾಗರಾಜ್ ಅವರು ಏಪ್ರಿಲ್ 30ರಂದು ಅಧಿಕಾರ ವಹಿಸಿಕೊಂಡಿದ್ದರು. ಇವತ್ತು ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡು ಹೊರ ಬರುತ್ತಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ತಹಶೀಲ್ದಾರ್ ನಾಗರಾಜ್ ಅವರು ಭೇಟಿಯಾದರು.
ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಪರಿಚಯಿಸಿಕೊಂಡ ನೂತನ ತಹಶೀಲ್ದಾರ್ ಅವರು, ಮೊದಲಿಗೆ ಕೈ ಮುಗಿಸಿದರು. ಬಳಿಕ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು. ಸಾರ್ವಜನಿಕವಾಗಿ ತಹಶೀಲ್ದಾರ್ ಅವರು ಸಚಿವರ ಕಾಲಿಗೆ ಬದ್ದಿದ್ದು ಆಕ್ಷೇಪಕ್ಕೆ ಕಾರಣವಾಗಿದೆ.
ಶಿವಮೊಗ್ಗದಲ್ಲಿ ತಹಶೀಲ್ದಾರ್ ಆಗಿದ್ದ ಗಿರೀಶ್ ಅವರನ್ನು ದಾವಣಗೆರೆಗೆ ವರ್ಗಾವಣೆ ಮಾಡಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗರಿಯಲ್ಲಿ ತಹಶೀಲ್ದಾರ್ ಅಗಿದ್ದ ನಾಗರಾಜ್ಅವರನ್ನು ಶಿವಮೊಗ್ಗಕ್ಕೆ ವರ್ಗಾಯಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





