ಶಿವಮೊಗ್ಗ ಲೈವ್.ಕಾಂ | SHIKARIPURA | 5 ಮೇ 2020
ಅಧಿಕೃತ ಪಾಸ್ ಇಲ್ಲದೆ ಬದಲಿ ಮಾರ್ಗದಲ್ಲಿ ಶಿವಮೊಗ್ಗ ಜಿಲ್ಲೆಯೊಳಗೆ ಬಂದಿದ್ದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂರು ಬೈಕ್ಗಳನ್ನು ಸೀಜ್ ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮುಖ್ಯ ರಸ್ತೆಯಲ್ಲಿ ಪೊಲೀಸ್ ಚೆಕ್ಪೋಸ್ಟ್ ಕಣ್ತಪ್ಪಿಸಿ ಬದಲಿ ಮಾರ್ಗದಲ್ಲಿ ಆರು ಮಂದಿ ಬಂದಿದ್ದರು. ಹಾವೇರಿ ಜಿಲ್ಲೆಯಿಂದ ಗುಳೇದಹಳ್ಳಿ ಮತ್ತು ಮಾರವಳ್ಳಿ ಗ್ರಾಮದ ಮೂಲಕ ಇವರು ಶಿಕಾರಿಪುರಕ್ಕೆ ಆಗಮಿಸಿದ್ದರು. ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಶಿಕಾರಿಪುರ ಗ್ರಾಮಾಂತರ ಠಾಣೆ ಪಿಎಸ್ಐ ರವಿಕುಮಾರ್ ಮತ್ತು ಸಿಬ್ಬಂದಿಗಳು ಇವರನ್ನು ಬಂಧಿಸಿದ್ದಾರೆ. ಆರು ಮಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]