ಶಿವಮೊಗ್ಗ ಲೈವ್.ಕಾಂ | SHIMOGA | 7 ಮೇ 2020
ಲಾಕ್ಡೌನ್ ನಡುವೆ ಎರಡು ಕಡೆ ನಡೆಯುತ್ತಿದ್ದ ಇಬ್ಬರು ಅಪ್ರಾಪ್ತೆಯರ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಈ ಸಂಬಂಧ ಪೋಷಕರಿಗೆ ತಿಳಿ ಹೇಳಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪ್ರಕರಣ 1
ಶಿವಮೊಗ್ಗ ತಾಲೂಕು ಹೊಳೆಹನಸವಾಡಿ ಗ್ರಾಮದಲ್ಲಿ ಅಪ್ರಾಪ್ತೆಯ ವಿವಾಹಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಭೇಟಿ ನೀಡಿ, ಪೋಷಕರಿಗೆ ತಿಳಿ ಹೇಳಿದ್ದಾರೆ. ವಿವಾಹ ನಡೆಸದಂತೆ ಸೂಚಿಸಿದ್ದಾರೆ.
ಪ್ರಕರಣ 2
ಶಿವಮೊಗ್ಗದ ಅನುಪಿನಕಟ್ಟೆಯ ಅಪ್ರಾಪ್ತೆಗೆ ಚಿತ್ರದುರ್ಗದಲ್ಲಿ ಮದುವೆ ನಿಶ್ಚಯವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ, ಚಿತ್ರದುರ್ಗದಲ್ಲಿ ಅಧಿಕಾರಿಗಳಿಗೆ ಮಾಹಿತಿ ನೀಡಿದ ಶಿವಮೊಗ್ಗದ ಅಧಿಕಾರಿಗಳು, ಮದುವೆ ನಿಲ್ಲಿಸಿದ್ದಾರೆ. ಅಪ್ರಾಪ್ತೆಯನ್ನು ಶಿವಮೊಗ್ಗಕ್ಕೆ ಕರೆಸಿಕೊಂಡಿದ್ದಾರೆ.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿ.ಜಿ.ಸುರೇಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆಗಳನ್ನು ನಡೆಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]