ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 9 ಮೇ 2020
ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ಕುಟುಂಬಕ್ಕೆ ಒಂದು ಕಾರ್ಡ್ ಎಂದು ನಿರ್ಬಂಧವಿಲ್ಲ. ಒಂದು ಕುಟುಂಬದ ಅರ್ಹ ಸದಸ್ಯರೆಲ್ಲರೂ ಜಾಬ್ ಕಾರ್ಡ್ಗೆ ಅರ್ಜಿ ಸಲ್ಲಿಸಿದರೆ ಕಾರ್ಡ್ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರು, ಜನಪ್ರತಿನಿಧಿಗಳು ಮತ್ತು ಆದಾಯ ತೆರಿಗೆದಾರರನ್ನು ಹೊರತುಪಡಿಸಿ ಯಾರು ಬೇಕಾದರೂ ಜಾಬ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದೀಗ ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಜನರು ಉದ್ಯೋಗಕ್ಕಾಗಿ ಮುಂದೆ ಬರುತ್ತಿದ್ದು, 15 ದಿನಗಳ ಒಳಗಾಗಿ ಕೂಲಿ ಮೊತ್ತವನ್ನು ಪಾವತಿಸಲಾಗುತ್ತಿದೆ ಎಂದು ಸಚಿವರ ಸ್ಪಷ್ಟನೆ ನೀಡಿದರು.
ಅದನ್ನ ನೋಡಿ ನಂಗೆ ಗಾಬರಿಯಾಯ್ತು
ಜಾಬ್ ಕಾರ್ಡ್ ಇದ್ದವರಿಗಷ್ಟೇ ಉದ್ಯೋಗ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಅದನ್ನು ನೋಡಿ ನನಗೆ ಗಾಬರಿಯಾಯ್ತು. ಅವರಿಗೆ ಮಾಹಿತಿ ಕೊರತೆ ಇದೆ. ಅದಕ್ಕೆ ಈ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ಈಶ್ವರಪ್ಪ ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422