ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA CITY | 10 ಮೇ 2020
ಈತನಕ ಗ್ರೀನ್ ಜೋನ್‌ನಲ್ಲಿದ್ದ ಶಿವಮೊಗ್ಗ ಜಿಲ್ಲೆಗು ಕರೋನ ಸೋಂಕು ವಕ್ಕರಿಸಿಕೊಂಡಿದೆ. ಎಂಟು ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ.
ಯಾರಿಗೆಲ್ಲ ಪಾಸಿಟಿವ್ ಬಂದಿದೆ?
ಗುಜರಾತ್ ರಾಜ್ಯದ ಅಹಮದಾಬಾದ್‌ನಿಂದ ಒಂಭತ್ತು ಮಂದಿ ಶಿವಮೊಗ್ಗಕ್ಕೆ ಬಸ್ಸಿನಲ್ಲಿ ಆಗಮಿಸಿದ್ದರು. ಈ ಪೈಕಿ ಎಂಟು ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಅಹಮದಾಬಾದ್‌ನಿಂದ ಬಂದಿದ್ದ ಒಂಭತ್ತು ಮಂದಿ ಪೈಕಿ ಏಳು ಜನ ಶಿಕಾರಿಪುರದವರು, ಒಬ್ಬರು ತೀರ್ಥಹಳ್ಳಿಯವರು ಎಂದು ತಿಳಿದು ಬಂದಿದೆ.
ಎಲ್ಲರಿಗೂ ತಬ್ಲಿಘಿ ನಂಟು
ಎಲ್ಲ ಒಂಭತ್ತು ಮಂದಿಗು ತಬ್ಲಿಘಿ ನಂಟು ಇದೆ ಎಂದು ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು. ಆದರೆ ಇವರೆಲ್ಲ ಅಹಮದಾಬಾದ್‌ನಿಂದ ನೇರವಾಗಿ ಇಲ್ಲಿಗೆ ಬಂದಿದ್ದಾರೆ. ಚೆಕ್‌ಪೋಸ್ಟ್‌ನಲ್ಲಿ ಕಾಮನ್ ತಪಾಸಣೆ ನಡೆಸಿದ್ದಾರೆ. ಆ ಬಳಿಕ ಇವರನ್ನು ನೇರವಾಗಿ ಕ್ವಾರಂಟೈನ್‌ಗೆ ಕಳುಹಿಸಿ, ಚಿಕಿತ್ಸೆ ಆರಂಭಿಸಲಾಗಿದೆ ಎಂದರು.
ಗ್ರೀನ್ ಜೋನ್‌ನಲ್ಲೇ ಉಳಿಯುತ್ತೆ ಶಿವಮೊಗ್ಗ
ಇವರೆಲ್ಲ ಅಹಮದಾಬಾದ್‌ನಿಂದ ಬಂದಿದ್ದಾರೆ. ಹಾಗಾಗಿ ಶಿವಮೊಗ್ಗ ಗ್ರೀನ್ ಜೋನ್‌ನಲ್ಲೇ ಉಳಿಯಲಿದೆ ಎಂದು ಈಶ್ವರಪ್ಪ ತಿಳಿಸಿದರು.
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















