ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಮೇ 2020
ಸಕ್ರೆಬೈಲು ಸಮೀಪ ಭಾನುವಾರ ಸಂಭವಿಸಿದ ಭೀಕರ ಅಪಘಾತದ ವಿಡಿಯೋ ವೈರಲ್ ಆಗಿದೆ. ಮಳೆಯ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದಾಗ ಅಪಘಾತ ಸೆರೆಯಾಗಿದೆ.
ಹೇಗಾಯ್ತು ಅಪಘಾತ?
ಭಾರಿ ಮಳೆ ಸುರಿಯುತ್ತಿದ್ದ ವೇಳೆ ಅಪಘಾತವಾಗಿದೆ. ತಿರುವಿನಲ್ಲಿ ವೇಗವಾಗಿ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಕ್ಕೆ ಜಾರಿದೆ. ಎದುರಿನಿಂದ ಬರುತ್ತಿದ್ದ ಬೈಕ್‍ಗೆ ಲಾರಿಯ ಹಿಂಭಾಗ ಅಪ್ಪಳಿಸಿದೆ. ಬಳಿಕ ಬೈಕ್‍ನ ಹಿಂದೆ ಬರುತ್ತಿದ್ದ ಕಾರಿಗೂ ಲಾರಿ ಗುದ್ದಿದೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.
ಒಬ್ಬ ಸಾವು, ಇಬ್ಬರಿಗೆ ಗಾಯ
ಬೈಕ್‍ನಲ್ಲಿ ಇಬ್ಬರು ಯುವಕರು ಪ್ರಯಾಣಿಸುತ್ತಿದ್ದರು. ಈ ಪೈಕಿ ಶಿವಮೊಗ್ಗದ ಜನಾರ್ದನ್ (19) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಬ್ಬ ಬೈಕ್ ಸವಾರ ರಫೀಕ್ ಗಂಭೀರವಾಗಿ ಗಾಯಗೊಂಡಿದ್ದಾನೆ.
ಇನ್ನು, ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಈ ಪೈಕಿ ಪ್ರತೀಕ್ಷಾ (19) ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ.
ಮೈ ಜುಮ್ ಅನಿಸುತ್ತೆ ವಿಡಿಯೋ
ಕಾರಿನಲ್ಲಿ ಬರುತ್ತಿದ್ದ ಯುವತಿಯೊಬ್ಬರು ಮಳೆಯ ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಇದು ಕೂಡ ಮೊಬೈಲ್‍ನಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆಗಿದೆ. ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






