ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಮೇ 2020
ಜಿಲ್ಲೆಯ ವಿವಿಧೆಡೆ ಕಳೆದ ಮೂರು ದಿನದಲ್ಲಿ ನಾಲ್ಕು ಕಡೆ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಾರೆ. ಅಲ್ಲದೆ ಪೋಷಕರಿಗೆ ತಿಳಿ ಹೇಳಿ, ಮದುವೆ ನಡೆಸದಂತೆ ಎಚ್ಚರಿಕೆಯನ್ನು ನೀಡಿದ್ದಾರೆ.
ಪ್ರಕರಣ 1
ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ 16 ವರ್ಷದ ಬಾಲಕಿಯೊಬ್ಬಳ ಮದುವೆ ನಿಶ್ಚಯ ಮಾಡಲಾಗಿತ್ತು. ಮಾಹಿತಿ ತಿಳಿದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ತೆರಳಿ ಮದುವೆಯನ್ನು ನಿಲ್ಲಿಸಿದ್ದಾರೆ.
ಪ್ರಕರಣ 2
ಶಿಕಾರಿಪುರದ ಹಳ್ಳಿಯೊಂದರಲ್ಲಿ 15 ವರ್ಷದ ಬಾಲಕಿಯೊಬ್ಬಳ ಮದುವೆ ಮಾಡಲು ಸಿದ್ಧತೆ ನಡೆಸಲಾಗಿತ್ತು. ಸ್ಥಳೀಯರು ನೀಡಿದ ಮಾಹಿತಿ ಆಧಾರದಲ್ಲಿ ಅಧಿಕಾರಿಗಳು ಭೇಟಿ ನೀಡಿ ಮದುವೆ ತಡೆದಿದ್ದಾರೆ.
ಪ್ರಕರಣ 3
ಭದ್ರಾವತಿ ತಾಲೂಕಿನ ಹಳ್ಳಿಯೊಂದರಲ್ಲೂ ಅಪ್ರಾಪ್ತೆಯ ಮದುವೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. 17 ವರ್ಷದ ಬಾಲಕಿಯ ಮದುವೆ ತಡೆದ ಪೊಲೀಸರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಪ್ರಕರಣ 4
ದಾವಣಗೆರೆ ಜಿಲ್ಲಾ ಮಕ್ಕಳ ಸಹಾಯವಾಣಿಗೆ ಬಂದ ಕರೆಯ ಹಿನ್ನೆಲೆ ನ್ಯಾಮತಿಯ 21 ವರ್ಷದ ಯುವಕನ ಜೊತೆಗೆ ಶಿವಮೊಗ್ಗ ತಾಲೂಕಿನ ಹಳ್ಳಿಯೊಂದರಲ್ಲಿ 16 ವರ್ಷದ ಬಾಲಕಿ ಜೊತೆಗೆ ನಿಶ್ಚಿಯವಾಗಬೇಕಿದ್ದ ಮದುವೆಯನ್ನು ತಡೆಯಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು