ತೀರ್ಥಹಳ್ಳಿಯ ಈ ಯುವಕನ ಬಗ್ಗೆ ಸುಳಿವು ಕೊಟ್ಟರೆ 3 ಲಕ್ಷ ರೂ. ಬಹುಮಾನ, ಯಾರವನು? ಬಹುಮಾನ ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಮೇ 2020

ತಲೆಮರೆಸಿಕೊಂಡಿರುವ ತೀರ್ಥಹಳ್ಳಿಯ ಯುವಕನೊಬ್ಬನ ಕುರಿತು ಸುಳಿವು ನೀಡಿದರೆ ಮೂರು ಲಕ್ಷ ರುಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಘೋಷಿಸಿದೆ. ಈ ಕುರಿತು ಎನ್‍ಐಎ ಪ್ರಕಟಣೆಯನ್ನು ಹೊರಡಿಸಿದೆ.

ಯಾರು ಆ ಯುವಕ? ಎಲ್ಲಿಯವನು?

ಅಬ್ದುಲ್ ಮತೀನ್ ಅಹ್ಮದ್ ತಾಹಾ (26), ಈತನ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಲು ನಿರ್ಧರಿಸಲಾಗಿದೆ. ಅಬ್ದುಲ್ ಮತೀನ್ ತಾಹಾ ತೀರ್ಥಹಳ್ಳಿ ತಾಲೂಕು ಸೊಪ್ಪುಗುಡ್ಡೆ ಗ್ರಾಮದ ಮೀನು ಮಾರ್ಕೆಟ್ ರಸ್ತೆಯ ನಿವಾಸಿ. ಕೆಲವು ತಿಂಗಳಿಂದ ಈತ ತಲೆಮರೆಸಿಕೊಂಡಿದ್ದಾನೆ.

ತಲೆ ಮರೆಸಿಕೊಂಡಿದ್ದೇಕೆ? ಬಹುಮಾನವೇಕೆ?

ಅಬ್ದುಲ್ ಮತೀನ್ ಉಗ್ರಗಾಮಿ ಚಟುವಟಿಕೆಯಲ್ಲಿ ತೊಡಗಿದ್ದಾನೆ ಎಂಬ ಆರೋಪವಿದೆ. ಈತನ ವಿರುದ್ಧ 2020ರ ಜನವರಿಯಲ್ಲಿ ಬೆಂಗಳೂರಿನ ಸದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನ ಗುರಪ್ಪನಪಾಳ್ಯದ ಮೆನಯೊಂದರಲ್ಲಿ ಐಎಸ್ಐಎಸ್ ಉಗ್ರಗಾಮಿ ಸಂಘಟನೆಯ ಸಭೆಗಳಲ್ಲಿ ಅಬ್ದುಲ್ ಮತೀನ್ ಪಾಲ್ಗೊಂಡಿದ್ದ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

THIRTHAHALLI MAP GRAPHICS 1 1

ಉಗ್ರ ಚಟುವಟಿಕೆ ನಡೆಸುವುದು, ಸಿರಿಯಾ ಮತ್ತು ಅಫಘನಿಸ್ಥಾನ ದೇಶಗಳಿಗೆ ತೆರಳಿ ಐಎಸ್ಐಎಸ್ ಜೊತೆ ಸೇರುವ ಕುರಿತು ಈ ಸಭೆಗಳಲ್ಲಿ ಚರ್ಚೆ ನಡೆಸಿದ್ದರು. ಇನ್ನು, ತಮಿಳುನಾಡಿನಲ್ಲಿ ಹಿಂದೂ ಸಂಘಟನೆ ಮುಖಂಡರೊಬ್ಬರ ಹತ್ಯೆ ಪ್ರಕರಣದಲ್ಲೂ ಭಾಗಿಯಾದ ಆರೋಪವಿದೆ. ಇವೆರಡು ಪ್ರಕರಣ ಸಂಬಂಧ ಹಲವರನ್ನು ಬಂಧಿಸಲಾಗಿದೆ ಎಂದು ಎನ್‍ಐಎ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆದರೆ ಅಬ್ದುಲ್ ಮತೀನ್ ತಲೆಮರೆಸಿಕೊಂಡಿದ್ದಾನೆ. ಇದೇ ಕಾರಣಕ್ಕೆ, ಈತನ ಕುರಿತು ಸುಳಿವು ನೀಡಿದವರಿಗೆ ಮೂರು ಲಕ್ಷ ರೂ ಬಹುಮಾನ ನೀಡುವುದಾಗಿ ಎನ್‍ಐಎ ತಿಳಿಸಿದೆ.

ತೀರ್ಥಹಳ್ಳಿಗೆ ಬಂದಿತ್ತು ತನಿಖಾ ತಂಡ

ಅಬ್ದುಲ್ ಮತೀನ್ ಪತ್ತೆ ಹೆಚ್ಚುವ ಸಲುವಾಗಿ ಜನವರಿ ತಿಂಗಳಲ್ಲಿ ಕೇಂದ್ರ ತನಿಖಾ ತಂಡ ಮತ್ತು ಬೆಂಗಳೂರು ಪೊಲೀಸರ ತಂಡವೊಂದು ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆ ಗ್ರಾಮಕ್ಕೆ ಆಗಮಿಸಿತ್ತು. ಇದು ತಾಲೂಕಿನಾದ್ಯಂತ ಆತಂಕ ಮೂಡಿಸಿತ್ತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 14, 2020

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

Leave a Comment