BREAKING NEWS | ಶಿವಮೊಗ್ಗದಲ್ಲಿ ನಾಲ್ಕು ವರ್ಷದ ಬಾಲಕಿ ಸೇರಿ ಮೂವರಿಗೆ ಕರೋನ ಪಾಸಿಟಿವ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಮೇ 2020

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮೂರು ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಸರ್ಕಾರ ಬಿಡಗುಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ಈ ಅಂಶ ತಿಳಿಸಲಾಗಿದೆ. ಇದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಸೋಂಕಿತರ ಪ್ರಕರಣ 12ಕ್ಕೆ ಏರಿಕೆ ಆಗಿದೆ.

Corona PPE Kit and swab box

ಮತ್ತೆ ಮೂರು ಪ್ರಕರಣಗಳು

ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್ ಪ್ರಕಾರ 32 ವರ್ಷದ ಮಹಿಳೆ (ಪೇಷಂಟ್ ನಂಬರ್ 1088), 42 ವರ್ಷದ ಪುರುಷ (ಪಿ.ನಂ.1089) ಮತ್ತು ನಾಲ್ಕು ವರ್ಷದ ಬಾಲಕಿ (1090) ಎಂದು ಗುರುತಿಸಲಾಗಿದೆ.

ಈ ಮೂವರು ಮುಂಬೈನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಇವರನ್ನು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Comment