ಶಿವಮೊಗ್ಗದಲ್ಲಿ ಕರೋನ ಕಂಟೈನ್ಮೆಂಟ್ ಜೋನ್ ಹೆಚ್ಚಳ, ಮೂರು ಗ್ರಾಮ ಸಂಪೂರ್ಣ ಸ್ಥಬ್ಧ, ಯಾವೆಲ್ಲ ಗ್ರಾಮಗಳು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಮೇ 2020

ಶಿವಮೊಗ್ಗ ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ ಹೆಚ್ಚಳವಾಗಿದೆ. ಈ ತನಕ ಒಂದೆ ಕಂಟೈನ್ಮೆಂಟ್ ಜೋನ್ ಇತ್ತು. ಆದರೆ ಎರಡು ಹೊಸ ಪಾಸಿಟಿವ್ ಪ್ರಕರಣದಿಂದ ಕಂಟೈನ್ಮೆಂಟ್ ಜೋನ್ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಕಂಟೈನ್ಮೆಂಟ್ ಜೋನ್ 1 | ತೀರ್ಥಹಳ್ಳಿ ತಾಲೂಕಿನ ಗ್ರಾಮ

ಪೇಷೆಂಟ್ ನಂಬರ್ 995 ಮುಂಬೈನಿಂದ ತೀರ್ಥಹಳ್ಳಿ ತಾಲೂಕು ಹಳ್ಳಿಕಬೈಲು ಗ್ರಾಮಕ್ಕೆ ಬಂದಿದ್ದರು. ಮರು ದಿನವೆ ಇವರಿಗೆ ಕರೋನ ಪಾಸಿಟಿವ್ ಬಂದಿತ್ತು. ಪಿ995 ಮತ್ತು ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿ ಇರುವವರು ಗ್ರಾಮದಲ್ಲಿ ಓಡಾಡಿದ್ದ ಹಿನ್ನೆಲೆ, ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿತ್ತು.

150520 Seal Down In Thirthahalli Ranjadakatte 1 1

ಕಂಟೈನ್ಮೆಂಟ್ ಜೋನ್ 2 | ಶಿಕಾರಿಪುರ ತಾಲೂಕು ತರಲಘಟ್ಟ

ಪಿ1304 ಇದೇ ಗ್ರಾಮದವರು. ಇವರಿಗೆ ಸೋಂಕು ತಗುಲಿದ್ದು ಹೇಗೆ ಅನ್ನುವುದೇ ತಿಳಿದು ಬಂದಿಲ್ಲ. ಇದು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತೀವ್ರ ತಲೆನೋವು ತಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತರಲಘಟ್ಟ ಗ್ರಾಮವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಗ್ರಾಮಸ್ಥರು ಮನೆಯಿಂದ ಹೊರಬರುವಂತಿಲ್ಲ. ಅಗತ್ಯ ವಸ್ತುಗಳನ್ನು ಜಿಲ್ಲಾಡಳಿತವೆ ಪೂರೈಸಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇನ್ನು ಗ್ರಾಮದೊಳಗೆ ಯಾರಿಗು ಪ್ರವೇಶವಿಲ್ಲ. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ತಹಶೀಲ್ದಾರ್ ಕವಿರಾಜ್ ಸೇರಿದಂತೆ ಹಲವು ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ, ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

https://www.facebook.com/liveshivamogga/videos/176244757052644/?t=0

ಕಂಟೈನ್ಮೆಂಟ್ ಜೋನ್ 3 | ಬಾಳೆಕೊಪ್ಪ, ಶಿವಮೊಗ್ಗ ತಾಲೂಕು

ಪಿ1305 ಈ ಗ್ರಾಮದವರು. ಇವರಿಗೂ ಸೋಂಕು ತಗುಲಿದ್ದು ಹೇಗೆ ಅನ್ನುವುದು ತಿಳಿದು ಬಂದಿಲ್ಲ. ಇತ್ತೀಚೆಗಷ್ಟೆ ಇವರು ದಾವಣಗೆರೆ ಜಿಲ್ಲೆಗೆ ಹೋಗಿ ಬಂದಿದ್ದರು. ಇವರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಹಾಗಾಗಿ ಬಾಳೆಕೊಪ್ಪ ಗ್ರಾಮವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಇಲ್ಲಿಯು ಮನೆಯಿಂದ ಯಾರು ಹೊರಗೆ ಬರುವಂತಿಲ್ಲ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

https://www.facebook.com/liveshivamogga/videos/696217444541367/?t=0

ಏನಿದು ಕಂಟೈನ್ಮೆಂಟ್ ಜೋನ್?

ಕರೋನ ಸೋಂಕು ಹರಡದಂತೆ ತಡೆಯಲು ಕಂಟೈನ್ಮೆಂಟ್ ಜೋನ್‍ಗಳನ್ನು ಸ್ಥಾಪಿಸಲಾಗುತ್ತದೆ. ಸೋಂಕಿತರು ಓಡಾಡಿರುವ ಜಾಗಗಳನ್ನು ಬಂದ್ ಮಾಡಲಾಗುತ್ತದೆ. ಆ ವ್ಯಾಪ್ತಿಯಲ್ಲಿ ಇರುವ ಎಲ್ಲರನ್ನು ನಿರಂತರ ಆರೋಗ್ಯ ತಪಾಸಣೆ ಒಳಪಡಿಸಲಾಗುತ್ತದೆ. ಒಂದು ವೇಳೆ ಇನ್ನಷ್ಟು ಸೋಂಕಿತರು ಆ ಸ್ಥಳದಲ್ಲಿದ್ದರೆ ಅವರನ್ನು ಕೂಡಲೆ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ. ಸೋಂಕು ಮತ್ತಷ್ಟು ಪ್ರದೇಶಕ್ಕೆ ಹರಡದಂತೆ ನಿಯಂತ್ರಿಸಲು ಕಂಟೈನ್ಮೆಂಟ್ ಜೋನ್ ಸ್ಥಾಪಿಸಲಾಗುತ್ತದೆ.

https://www.facebook.com/liveshivamogga/videos/239331247335103/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 20, 2020

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

Leave a Comment