ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಮೇ 2020
ಕರೋನ ಸೋಂಕು ಹರಡುವ ಆತಂಕವಿರುವ ಹಿನ್ನೆಲೆ ಜಿಲ್ಲೆಯಲ್ಲಿ ಆಟೋ ಸಂಚಾರಕ್ಕೆ ಜಿಲ್ಲಾಡಳಿತ ಹೊಸ ನಿಯಮ ಘೋಷಿಸಿದೆ. ಈ ನಿಯಮಗಳನ್ನು ಆಟೋ ಚಾಲಕರು ಕಡ್ಡಾಯವಾಗಿ ಪಾಲಿಸಬೇಕು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಆಟೋ ಚಾಲಕರು ಮತ್ತು ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಏನೆಲ್ಲ ನಿಯಮಗಳನ್ನು ಪಾಲಿಸಬೇಕಿದೆ?
ಆಟೋದಲ್ಲಿ ಚಾಲಕ ಮತ್ತು ಪ್ರಯಾಣಿಕರ ನಡುವೆ ತೆಳುವಾದ ಪ್ಲಾಸ್ಟಿಕ್ ಶೀಟ್ ಅಳವಡಿಸುವುದು ಕಡ್ಡಾಯ.
ಮಾಸ್ಕ್ ಧರಿಸದ ಪ್ರಯಾಣಿಕರನ್ನು ಯಾವುದೇ ಕಾರಣಕ್ಕೂ ಆಟೋದೊಳಗೆ ಹತ್ತಿಸಿಕೊಳ್ಳುವಂತಿಲ್ಲ.
ಆಟೋ ಚಾಲಕರೆ ಪ್ರಯಾಣಿಕರಿಗೆ ಮಾಸ್ಕ್ ನೀಡುವುದಕ್ಕೆ ಯಾವುದೆ ಅಭ್ಯಂತರ ಇಲ್ಲ.
ಆಟೋದಲ್ಲಿ ಕಡ್ಡಾಯವಾಗಿ ಇಬ್ಬರು ಪ್ರಯಾಣಿಕರನ್ನಷ್ಟೆ ಕರೆದೊಯ್ಯಬೇಕು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]