ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | HOLEHONNURU NEWS | 23 ಮೇ 2020
ಪೂಜೆಗೆಂದು ತೆರಳುತ್ತಿದ್ದವರ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೆಲವೆ ಕ್ಷಣದಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ.
ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 13ರ ಕೂಡ್ಲಿ ಕ್ರಾಸ್ ಬಳಿ ಚಲಿಸುತ್ತಿದ್ದ ಕಾರಿನ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ಅಪ್ಪ, ಮಗ ಕೂಡಲೇ ರಸ್ತೆ ಪಕ್ಕಕ್ಕೆ ನಿಲ್ಲಿಸಿ, ಕೆಳಗಿಳಿದಿದ್ದಾರೆ. ಕೆಲವೇ ಕ್ಷಣದಲ್ಲಿ ಕಾರು ಧಗಧಗ ಹೊತ್ತಿ ಉರಿದಿದೆ.
ಪೂಜೆಗೆ ಹೊರಟಿದ್ದಾಗ ಅವಘಡ
ಶಿವಮೊಗ್ಗದ ನೆಹರು ರಸ್ತೆಯ ನಿವಾಸಿಯೊಬ್ಬರು ಮಗನೊಂದಿಗೆ ಚನ್ನಗಿರಿ ತಾಲೂಕಿನ ದೇವಸ್ಥಾನವೊಂದರಲ್ಲಿ ಪೂಜೆಗೆ ತೆರಳುತ್ತಿದ್ದರು. ಈ ವೇಳೆ ಎಂಜಿನ್ ಭಾಗದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡು, ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಬರುವ ಹೊತ್ತಿಗೆ ಕಾರು ಭಾಗಶಃ ಸುಟ್ಟು ಹೋಗಿದೆ.
ಸೇತುವೆ ಮೇಲೆ ಟ್ರಾಫಿಕ್ ಜಾಮ್
ಕಾರು ಹೊತ್ತಿ ಉರಿಯುತ್ತಿದ್ದರಿಂದ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಸೇತುವೆ ಮೇಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬೆಂಕಿಗಾಹುತಿ ಆಗಿದ್ದ ಕಾರಿನ ಪಕ್ಕದಲ್ಲಿ ಕೆಲವು ವಾಹನಗಳಷ್ಟೇ ಸಂಚರಿಸಿದವು. ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸಪಟ್ಟರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






