ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಮೇ 2020
ಲಾಕ್‍ಡೌನ್ ಹಿನ್ನೆಲೆ ರಂಜಾನ್ ಹಬ್ಬವನ್ನು ಸರ್ಕಾರದ ಮಾರ್ಗಸೂಚಿಯಂತೆ ಮನೆಯಲ್ಲಿಯೇ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮನವಿ ಮಾಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮುಸ್ಲಿಮ್ ಸಮುದಾಯದ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿರುವುದಿಲ್ಲ. ಈ ಹಿನ್ನಲೆಯಲ್ಲಿ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಈ ವಿಶೇಷ ಸಂದರ್ಭದಲ್ಲಿ ಎಲ್ಲರೂ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಸಹಕರಿಸಬೇಕು ಎಂದರು.

ರಂಜಾನ್ ಶುಭಾಶಯಕ್ಕಾಗಿ ಕೈಕುಲುಕುವುದು, ತಬ್ಬಿಕೊಳ್ಳುವುದನ್ನು ಆದಷ್ಟು ತಪ್ಪಿಸಬೇಕು. ಕಂಟೈನ್‍ಮೆಂಟ್ ಪ್ರದೇಶದಲ್ಲಿ ಈ ರೀತಿಯಲ್ಲಿ ಶುಭಾಶಯ ಯಾವುದೇ ಕಾರಣಕ್ಕೂ ಕೋರಬಾರದು. ಈದ್ಗಾಗಳಲ್ಲಿ ಪ್ರಾರ್ಥನೆಗೆ ಅವಕಾಶವಿರುವುದಿಲ್ಲ. ಎಲ್ಲರೂ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















