ಕರೋನ ಸೋಂಕಿತರ ವಿರುದ್ಧ ತೀರ್ಥಹಳ್ಳಿ, ಶಿವಮೊಗ್ಗದ ತುಂಗಾ ನಗರ ಠಾಣೆಗಳಲ್ಲಿ ಕೇಸ್, ಕಾರಣವೇನು? ಕೇಸ್ ಹಾಕಿದ್ಯಾರು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಮೇ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಅಧಿಕೃತ ಪಾಸ್ ಇಲ್ಲದೆ ಅನ್ಯರಾಜ್ಯದಿಂದ ಶಿವಮೊಗ್ಗ ಜಿಲ್ಲೆಗೆ ಬಂದವರ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ಪ್ರತ್ಯೇಕ ಪ್ರಕರಣದಲ್ಲಿ ಐವರ ವರುದ್ಧ ಕೇಸ್ ದಾಖಲಾಗಿದೆ. ಈ ಐವರು ಕರೋನ ಸೋಂಕಿಗೆ ತುತ್ತಾಗಿದ್ದಾರೆ.

ಕೇಸ್ 1 | ತೀರ್ಥಹಳ್ಳಿ ಪೊಲೀಸ್ ಠಾಣೆ

ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ NDMA ಕಾಯ್ದೆಯ ಸೆಕ್ಷನ್ 51(B) ಅನ್ವಯ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಈ ವ್ಯಕ್ತಿ ಅಧಿಕೃತ ಪಾಸ್‍ ಹೊಂದದೆ ತೀರ್ಥಹಳ್ಳಿ ತಾಲೂಕಿನ ಹಳ್ಳಿಬೈಲು ಮುಳುಬಾಗಿಲು ಗ್ರಾಮಕ್ಕೆ ಬಂದಿದ್ದರು. ಈ ವ್ಯಕ್ತಿಗೆ ಕರೋನ ಪಾಸಿಟಿವ್ ಬಂದಿದ್ದು, ತಾಲೂಕಿನಾದ್ಯಂತ ಆತಂಕ ಸೃಷ್ಟಿಯಾಗಿತ್ತು.

ಕೇಸ್ 2 | ತುಂಗಾ ನಗರ ಪೊಲೀಸ್ ಠಾಣೆ

ಮತ್ತೊಂದು ಪ್ರಕರಣದಲ್ಲಿ ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ವರ ವಿರುದ್ಧ ಕೇಸ್ ದಾಖಲಾಗಿದೆ. ಮೇ 18ರಂದು ಇವರು ತಮಿಳುನಾಡಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಇವರ ಬಳಿಯುವ ಅಧಿಕೃತ ಪಾಸ್ ಇರಲಿಲ್ಲ. ಈ ನಾಲ್ವರಿಗು ಈಗ ಕರೋನ ಸೋಂಕು ತಗುಲಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment