ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜೂನ್ 2020
ಕೊರೋನ ಸೋಂಕಿನ ಸಂಕಷ್ಟದ ಸಂದರ್ಭದಲ್ಲಿಯೂ ಜನರ ಹಿತ ಮತ್ತು ಆರೋಗ್ಯ ಕಾಪಾಡುವಲ್ಲಿ ಶ್ರಮಿಸುತ್ತಿರುವ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಇವುಗಳೊಂದಿಗೆ ಹಗಲಿರುಳು ಶ್ರಮಿಸುತ್ತಿರುವ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಶ್ರಮ ಅನನ್ಯವಾದುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಸಹಕಾರ ಇಲಾಖೆ ಹಾಗೂ ಜಿಲ್ಲೆಯ ಎಲ್ಲ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಗರದ ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಆಶಾ ಕಾರ್ಯಕರ್ತೆಯರಿಗೆ ಚೆಕ್ ವಿತರಣಾ ಸಮಾರಂಭದಲ್ಲಿ ಫಲಾನುಭವಿಗಳಿಗೆ ಚೆಕ್ ವಿತರಿಸಿ ಅವರು ಮಾತನಾಡಿದರು.
ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಶ್ರಮಿಸಿದ ಆಶಾ ಕಾರ್ಯಕರ್ತೆಯರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದ ಅವರು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಇರುವ ಹಾಲಿನ ಡೈರಿ, ಎಪಿಎಂಸಿ ಹಾಗೂ ಸಹಕಾರ ಸಂಘಗಳ ನೆರವಿನೊಂದಿಗೆ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತರಿಗೆ ಮೂರು ಸಾವಿರ ರೂಗಳ ಪ್ರೋತ್ಸಾಹ ಧನ ನೀಡಿ ಅವರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದರು.
ಈ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಸಹಕಾರ ಇಲಾಖೆಯ ಜಂಟಿ ನಿಬಂಧಕರಿಗೆ ಇದರ ಸಂಪೂರ್ಣ ಹೊಣೆಗಾರಿಕೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯ 1034 ಆಶಾ ಕಾರ್ಯಕರ್ತೆಯರಿಗೆ ಈ ಸೌಲಭ್ಯ ದೊರೆಯಲಿದೆ. ಜಿಲ್ಲೆಯಲ್ಲಿ ಲಾಭದಾಯಕ ಸ್ಥಿತಿಯಲ್ಲಿರುವ 794 ಸಹಕಾರ ಸಂಘಗಳಿಂದ 1.65ಕೋಟಿ ರೂ.ಗಳ ಧನ ಸಂಗ್ರಹ ಮಾಡಲಾಗಿದೆ ಎಂದರು.
ಆಶಾ ಕಾರ್ಯಕರ್ತೆಯರ ರಕ್ಷಣೆಗಾಗಿ ಡಿಸಿಸಿ ಬ್ಯಾಂಕ್ ಮೂಲಕ ಸಹಕಾರ ಸಂಘಗಳನ್ನು ರಚಿಸಿ ಅಗತ್ಯ ಸಾಲ-ಸೌಲಭ್ಯಗಳನ್ನು ಒದಗಿಸಲು ಉದ್ದೇಶಿಸಲಾಗಿದ್ದು , ಈ ಸಂಬಂಧ ಮುಖ್ಯಮಂತ್ರಿ ಜೊತೆ ಸಮಾಲೋಚನೆ ನಡೆಸಲಾಗಿದೆ. ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿದೆ ಎಂದವರು ನುಡಿದರು.
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮ್ಯಾಮ್ಕೋಸ್ ಉಪಾಧ್ಯಕ್ಷ ವೈ ಎಸ್ ಸುಬ್ರಮಣ್ಯ, ಶಿಮುಲ್ ಅಧ್ಯಕ್ಷ ಆನಂದ್, ಮಂಡಿ ಮರ್ಚೆಂಟ್ಸ್ ಬ್ಯಾಂಕ್ ನ ಅಧ್ಯಕ್ಷ ಹೆಚ್.ಎಂ.ಮಧು, ಎಪಿಎಂಸಿ ಅಧ್ಯಕ್ಷ ದುಗ್ಗಪ್ಪ ಗೌಡ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಅಪರ ಜಿಲ್ಲಾಧಿಕಾರಿ ಅನುರಾಧಾ ಮುಂತಾದವರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422