ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020
ಗ್ರಾಮ ಪಂಚಾಯಿತಿ ಚುನಾವಣೆ ನಡೆಸಬೇಕು, ಎಪಿಎಂದಿ ಕಾಯ್ದೆಗೆ ತಿದ್ದುಪಡಿಗೆ ವಿರೋಧ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇವತ್ತು ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೆಸಿಗರು, ಕೋವಿಡ್ ನೆಪದಲ್ಲಿ ಬಿಜೆಪಿಯವರು ತಮ್ಮ ಪಕ್ಷದ ಕಾರ್ಯಕರ್ತರನ್ನು ಗ್ರಾಮ ಪಂಚಾಯಿತಿಗೆ ನಾಮನಿರ್ದೇಶನ ಮಾಡಲು ಹೊರಟಿದ್ದಾರೆ. ಪಂಚಾಯತ್ ರಾಜ್ ಅಧಿನಿಯಮದಲ್ಲಿ ಇದಕ್ಕೆ ಅವಕಾವಿಲ್ಲ. ಹಾಗಾಗಿ ಕೂಡಲೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದರು.
ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ರೈತರಿಗೆ ಸಮಸ್ಯೆ ಉಂಟು ಮಾಡಿದ್ದಾರೆ. ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತಂದು ಸಣ್ಣ ಉದ್ಯಮ, ರೈತರಿಗೆ ನಷ್ಟ ಮಾಡುತ್ತಿದ್ದಾರೆ. ಇದರಿಂದ ಖಾಸಗಿ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ.
ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದು ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸಿದೆ. ಕಾರ್ಮಿಕರನ್ನು ನಿರ್ಲಕ್ಷಿಸುತ್ತರುವ ಸರ್ಕಾರದ ನಡೆ ವಿರುದ್ಧ ಹೋರಾಟ ರೂಪಿಸಲಾಗುತ್ತದೆ ಎಂದು ಕಾಂಗ್ರೆಸಿಗರು ಎಚ್ಚರಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್, ಮಾಜಿ ಶಾಸಕ ಆರ್.ಪ್ರಸನ್ನಕುಮಾರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















