ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜೂನ್ 2020
ಲಾಕ್ ಡೌನ್ ರಿಲೀಫ್ ಬೆನ್ನಿಗೆ ಶಿವಮೊಗ್ಗದ ಪ್ರವಾಸಿ ತಾಣಗಳು ಪುನಃ ಓಪನ್ ಆಗಿವೆ. ಇವತ್ತಿಂದ ಹುಲಿ ಮತ್ತು ಸಿಂಹಧಾಮ, ಜೋಗ ಜಲಪಾತ, ಸಕ್ರೆಬೈಲು ಸೇರಿದಂತೆ ಹಲವು ಪ್ರವಾಸಿ ತಾಣಗಳು ಸಾರ್ವಜನಿಕರಿಗೆ ಮುಕ್ತವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎಲ್ಲೆಲ್ಲಿ ಹೇಗಿದೆ ವ್ಯವಸ್ಥೆ ಇದೆ?
ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಸಾರ್ವಜನಿಕ ಪ್ರವೇಶ ಇವತ್ತಿನಿಂದ ಆರಂಭವಾಗಿದೆ. ಸಿಂಹಧಾಮಕ್ಕೆ ಬರುವ ಪ್ರತಿಯೊಬ್ಬರಿಗೂ ಥರ್ಮಲ್ ಟೆಸ್ಟ್ ಮಾಡಲಾಗುತ್ತಿದೆ. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಇನ್ನು ಸಾಫಾರಿಗೆ ತೆರಳುವ ವಾಹನಗಳಲ್ಲೂ ಸಾಮಾಜಿಕ ಅಂತರ ಇರಲಿದೆ. ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಹುಲಿ ಮತ್ತು ಸಿಂಹಧಾಮಕ್ಕೆ ಸಾರ್ವಜನಿಕ ಪ್ರವೇಶ ಇರಲಿದೆ.
ಮತ್ತೊಂದೆಡೆ ವಿಶ್ವವಿಖ್ಯಾತ ಜೋಗ ಜಲಪಾತಕ್ಕೂ ಇವತ್ತಿನಿಂದ ಸಾರ್ವಜನಿಕ ಪ್ರವೇಶಕ್ಕೆ ಅವಕಾಶವಿದೆ. ಸಕ್ರೆಬೈಲು ಆನೆ ಬಿಡಾರ ಸೇರಿದಂತೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಪುನಃ ಆಕರ್ಷಸುತ್ತಿವೆ. ಎಲ್ಲೆಡೆ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]