ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜೂನ್ 2020
ತುಂಗಾ ಡ್ಯಾಂ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮುಂಗಾರು ಮಳೆ ಆಗುತ್ತಿದ್ದು, ಡ್ಯಾಂನ ಒಳಹರಿವು ಹೆಚ್ಚಾಗುತ್ತಿದೆ. ಹಾಗಾಗಿ ಯಾವುದೇ ಸಂದರ್ಭದಲ್ಲಿ ಹೆಚ್ಚುವರಿ ನೀರನ್ನು ಡ್ಯಾಂ ಗೇಟುಗಳಿಂದ ತುಂಗಾ ನದಿಗೆ ಬಿಡಬಹುದಾಗಿದೆ ಎಂದು ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತುಂಗಾ ನದಿ ಪಾತ್ರದ ಪ್ರದೇಶದಲ್ಲಿ ವಾಸಿಸುತ್ತಿರುವ ಗ್ರಾಮಸ್ಥರು ಹಾಗೂ ಸಾರ್ವಜನಿಕರು ನದಿ ಪಾತ್ರದಲ್ಲಿ ಯಾವುದೇ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಇನ್ನು, ನದಿ ದಂಡೆಯಿಂದ ಎತ್ತರದ ಪ್ರದೇಶಕ್ಕೆ ಸುರಕ್ಷತಾ ದೃಷ್ಠಿಯಿಂದ ಸ್ಥಳಾಂತರಗೊಳ್ಳುವಂತೆ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಲಾಶಯದ ನೀರಿನ ಮಟ್ಟ
ಜಲಾಶಯದ ನೀರಿನ ಗರಿಷ್ಠ ಮಟ್ಟ 587.17 ಮೀಟರ್. ಒಟ್ಟು 2.650 ಟಿಎಂಸಿ ನೀರಿನ ಸಂಗ್ರಹದ ಪೈಕಿ 1.821 ಟಿಎಂಸಿ ನೀರು ಭರ್ತಿಯಾಗಿದೆ. 417 ಕ್ಯೂಸೆಕ್ ಒಳ ಹರಿವಿದೆ. 35 ಕ್ಯೂಸೆಕ್ ಹೊರ ಹರಿವುದು ಇದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]