ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಕಂಟೈನ್ಮೆಂಟ್ ಜೋನ್ ನಿರ್ಮಿಸಲಾಗಿದೆ. ಮುಂಬೈನಿಂದ ಉಡುಪಿ ಜಿಲ್ಲೆಯ ಮೂಲಕ ಹೊಸನಗರಕ್ಕೆ ಬಂದಿದ್ದ ಮಹಿಳೆಗೆ ಕರೋನ ಪಾಸಿಟಿವ್ ಬಂದ ಹಿನ್ನೆಲೆ, ಹೊಸನಗರದಲ್ಲಿ ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.
ಹೊಸ ಕಂಟೈನ್ಮೆಂಟ್ ಜೋನ್ ಯಾವುದು?
ಹೊಸನಗರ ತಾಲೂಕಿನ ಜಯನಗರ ನೂತನ ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಮಹಿಳೆ ಉಳಿದುಕೊಂಡಿದ್ದ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ. ಮಹಿಳೆಯ ಮನೆ ಸೇರಿದಂತೆ ಜಯನಗರದಾದ್ಯಂತ ಅಗ್ನಿಶಾಮಕ ವಾಹನದ ಮೂಲಕ ಔಷಧಿ ಸಿಂಪಡಣೆ ಮಾಡಲಾಗಿದೆ. ಗ್ರಾಮದಲ್ಲಿ ಬೆಳಗ್ಗೆ 7 ರಿಂದ 12 ಗಂಟೆವರೆಗೆ ಮಾತ್ರ ಅಂಗಡಿ ತೆಗೆಯಲು ಅನುಮತಿ ನೀಡಲಾಗಿದೆ. ಸಾಮಾಜಿಕ ಅಂತರ, ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
ಜಯನಗರಕ್ಕೆ ಮಹಿಳೆ ಬಂದಿದ್ದು ಹೇಗೆ?
ಮುಂಬೈನಲ್ಲಿ ನೆಲೆಸಿದ್ದ ಮಹಿಳೆ ಕುಟುಂಬ ಸಹಿತ ಮೇ.18ರಂದು ರೈಲು ಮೂಲಕ ಕುಂದಾಪುರಕ್ಕೆ ಆಗಮಿಸಿದ್ದರು.
ಮೇ 25ರವರೆಗೆ ಕುಂದಾಪುರ ತಾಲೂಕಿನ ಹರ್ಲಾಡಿಯ ಶಾಲೆಯೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು.
ಏಳು ದಿನ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದ ಮಹಿಳೆ, ಕುಂದಾಪುರದಿಂದ ಹೊಸನಗರದ ಜಯನಗರ ಗ್ರಾಮದ ಮನೆಗೆ ಬಂದಿದ್ದರು. ಇಲ್ಲಿಯೂ ಹೋಂ ಕ್ವಾರಂಟೈನ್‍ನಲ್ಲಿದ್ದರು.
ಕುಂದಾಪುರದಿಂದ ಹಿಂತಿರುಗುವಾಗ ಇವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರ ವರದಿ ಬಂದಿದ್ದು, ಮಹಿಳೆಗೆ ಪಾಸಿಟವ್ ದೃಢಪಟ್ಟಿದೆ.
ಕೂಡಲೇ ಮಹಿಳೆಯನ್ನು ಆಂಬುಲೆನ್ಸ್ ಮೂಲಕ ಉಡುಪಿ ಜಿಲ್ಲೆಗೆ ಕಳುಹಿಸಲಾಗಿದೆ. ಅವರ ಕುಟುಂಬದವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















